ಬೆಂಗಳೂರು: ಐತಿಹಾಸಿಕ ಕಡಲೆಕಾಯಿ ಪರಿಷೆಗೆ ಇಂದಿನಿಂದ ಅಧಿಕೃತ ಚಾಲನೆ ದೊರೆತಿದೆ. ಕಾರ್ತಿಕ ಮಾಸದ ಕೊನೆಯ ಸೋಮವಾರವಾದ ಇಂದು ಬಸವನಗುಡಿಯ ದೊಡ್ಡ ಬಸವಣ್ಣನ ದೇಗುಲದಲ್ಲಿ ಅಭಿಷೇಕದೊಂದಿಗೆ ಪರಿಷೆ ಆರಂಭವಾಗಿದ್ದು, ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಚಾಲನೆ ನೀಡಿದರು.
ಎರಡು ದಿನಗಳ ಬದಲು ಇದೇ ಮೊದಲ ಬಾರಿಗೆ ಐದು ದಿನಗಳ ಕಾಲ ಪರಿಷೆ ನಡೆಯಲಿದ್ದು, ಬಸವನಗುಡಿಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಲಕ್ಷಾಂತರ ಜನರ ಜಾತ್ರೆಯಲ್ಲಿ ಭಾಗಿಯಾಗುವ ನಿರೀಕ್ಷೆಯಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ.
ಪ್ಲಾಸ್ಟಿಕ್ ಮುಕ್ತ: ಈ ಬಾರಿಯ ಪರಿಷೆ ಪ್ಲಾಸ್ಟಿಕ್ ಮುಕ್ತವಾಗಿರಲಿದ್ದು, ವ್ಯಾಪಾರಿಗಳು ಪೇಪರ್ ಬ್ಯಾಗ್ಗಳನ್ನು ವಿತರಿಸಿ ಪ್ಲಾಸ್ಟಿಕ್ ಬಳಸದಂತೆ ಸ್ವಯಂಸೇವಕರು ಅರಿವು ಮೂಡಿಸುತ್ತಿದ್ದಾರೆ. ಪ್ಲಾಸ್ಟಿಕ್ ಬಳಸುವ ಅಂಗಡಿಗಳನ್ನು ತೆರವುಗೊಳಿಸಲಾಗುವುದು ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
Laxmi News 24×7