Breaking News

ಹುಕ್ಕೇರಿ ನಗರದ ತಾ.ಪಂ. ಭವನದಲ್ಲಿ ಇಂದು ಹುಕ್ಕೇರಿ ತಾಲೂಕಿನ ಪ್ರಗತಿ ಪರಿಶೀಲನಾ ಸಭೆ

Spread the love

ಹುಕ್ಕೇರಿ ನಗರದ ತಾ.ಪಂ. ಭವನದಲ್ಲಿ ಇಂದು ಹುಕ್ಕೇರಿ ತಾಲೂಕಿನ ಪ್ರಗತಿ ಪರಿಶೀಲನಾ ಸಭೆಯನ್ನು ಸಚಿವ ಸತೀಶ್ ಜಾರಕಿಹೊಳಿ ನಡೆಸಿದರು.
ವಿವಿಧ ಇಲಾಖೆಗಳ ಅನುದಾನದಡಿ ಈಗಾಗಲೇ ಅನುಮೋದನೆಯಾದ ಅಂಬೇಡ್ಕರ್ ಭವನಗಳು, ವಾಲ್ಮೀಕಿ ಭವನಗಳು, ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿ, ರಸ್ತೆ ನಿರ್ಮಾಣ, ಹೈ ಮಾಸ್ಟ್ ದೀಪಗಳು, ಸ್ಮಶಾನ ಅಭಿವೃದ್ಧಿ ಸೇರಿದಂತೆ ಅನೇಕ ಪ್ರಮುಖ ಕಾಮಗಾರಿಗಳಿಗೆ ಒಂದು ತಿಂಗಳೊಳಗೆ ಚಾಲನೆ ನೀಡಬೇಕು ಎಂದು ಸಂಬಂಧಿತ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು
ಸಭೆಯಲ್ಲಿ ಸಾರ್ವಜನಿಕರಿಂದ ಬಂದ ಅಹವಾಲುಗಳನ್ನು ಆಲಿಸಿ, ಅವರ ಸಮಸ್ಯೆಗಳಿಗೆ ಸ್ಥಳದಲ್ಲೇ ತಕ್ಷಣದ ಪರಿಹಾರ ಒದಗಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಅದೇ ಸಂದರ್ಭದಲ್ಲಿ ಹುಕ್ಕೇರಿ ತಾಲೂಕಿನ ಕೆಡಿಪಿ ಸಮಿತಿಗೆ ನಾಮನಿರ್ದೇಶನಗೊಂಡ ಸದಸ್ಯರಿಗೆ ನಿಯೋಜನ ಪ್ರಮಾಣ ಪತ್ರಗಳನ್ನು ವಿತರಿಸಿದರು.
ಈ ವೇಳೆ ಎಲ್ಲ‌ ಇಲಾಖೆಗಳ ತಾಲೂಕಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ