Breaking News

ಬೆಳಗಾವಿಯಲ್ಲಿ ಬೆಂಕಿ ಕಾಯಿಸಿಕೊಳ್ಳುವಾಗ ಆವರಿಸಿದ ದಟ್ಟ ಹೊಗೆ: ಉಸಿರುಗಟ್ಟಿ ಮೂವರು ಯುವಕರ ದುರ್ಮರಣ

Spread the love

ಬೆಳಗಾವಿ: ಕೊರೆಯುವ ಚಳಿ ಹಿನ್ನೆಲೆ ರೂಮಿನಲ್ಲಿ ಇದ್ದಿಲಿನ ಬೆಂಕಿ ಕಾಯಿಸುತ್ತಾ ಮಲಗಿದ್ದ ನಾಲ್ವರು ಯುವಕರ ಪೈಕಿ ಮೂವರು ಯುವಕರು ಉಸಿರುಗಟ್ಟಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಬೆಳಗಾವಿಯ ಅಮನ್ ನಗರದಲ್ಲಿ ನಡೆದಿದೆ.

ಸೋಮವಾರ ರಾತ್ರಿ ರೂಮಿನಲ್ಲಿ ಇದ್ದಿಲಿನ ಬೆಂಕಿ ಇಟ್ಟುಕೊಂಡು ಮಲಗಿದ್ದರು‌. ನಿದ್ರೆಗೆ ಜಾರಿದಾಗ ರೂಮಿನಲ್ಲಿ ದಟ್ಟ ಹೊಗೆ ಆವರಿಸಿದೆ. ಈ ವೇಳೆ ಉಸಿರಾಟದ ಸಮಸ್ಯೆ ಉಂಟಾಗಿ ಸಾವಾಗಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿದು ಬಂದಿದೆ.

ಅಮನ್ ನಗರದ ನಿವಾಸಿಗಳಾದ ರಿಹಾನ್ ಮತ್ತೆ(22), ಮೋಹಿನ್ ನಾಲಬಂದ್(23), ಸರ್ಫರಾಜ್ ಹರಪನಹಳ್ಳಿ(22) ಸಾವನ್ನಪ್ಪಿದರೆ ಮತ್ತೋರ್ವ ಯುವಕ ಶಾಹನವಾಜ್(19) ಸ್ಥಿತಿ ಗಂಭೀರವಾಗಿದೆ. ಗಾಯಾಳು ಯುವಕನನ್ನು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.‌ಈ ಘಟನೆಯಿಂದ ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದಾರೆ. ಸ್ಥಳಕ್ಕೆ ಮಾಳಮಾರುತಿ ಠಾಣೆ ಪೊಲೀಸರು, ಸೋಕೊ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಶಾಸಕ ಆಸೀಫ್ ಸೇಠ್ ಅವರು ಕೂಡ ಸ್ಥಳಕ್ಕೆ ಭೇಟಿ ನೀಡಿ ಸ್ಥಳೀಯರಿಂದ ಮಾಹಿತಿ ಪಡೆದರು.


Spread the love

About Laxminews 24x7

Check Also

ಅರಿಹಂತ ಕಾರ್ಖಾನೆಯಿಂದ ಟನ್ ಕಬ್ಬಿಗೆ 3350 ರೂಪಾಯಿ ದರ, ಮಾಲಿಕರಿಗೆ ರೈತರಿಂದ ಸನ್ಮಾನ

Spread the love ಚಿಕ್ಕೋಡಿ:ಜೈನಾಪುರದ ಅರಿಹಂತ ಶುಗರ್ ಇಂಡಸ್ಟ್ರೀಸ್ ವತಿಯಿಂದ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ಅಭಿನಂದನ ಪಾಟೀಲ ಮತ್ತು ಯುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ