Breaking News

ಬೆಳಗಾವಿಯ ಸಾಯಿರಾಜ್ ಟ್ರೋಫಿಗೆ ಶಾಸಕ ಅಭಯ್ ಪಾಟೀಲ್ ಚಾಲನೆ

Spread the love

ಬೆಳಗಾವಿಯ ಸಾಯಿರಾಜ್ ಟ್ರೋಫಿಗೆ ಶಾಸಕ ಅಭಯ್ ಪಾಟೀಲ್ ಚಾಲನೆ
ಸಾಯಿರಾಜ್ ಟ್ರೋಫಿಗೆ ಇಂದು ದಕ್ಷಿಣ ಶಾಸಕ ಅಭಯ್ ಪಾಟೀಲ್ ಅವರು ವ್ಯಾಕ್ಸಿನ್ ಡಿಪೋ ಮೈದಾನದಲ್ಲಿ ಇಂದು ವಿಧ್ಯುಕ್ತವಾಗಿ ಚಾಲನೆ ನೀಡಿದರು.
ಬೆಳಗಾವಿ ನಗರದ ವ್ಯಾಕ್ಸಿನ್ ಡಿಪೋ ಮೈದಾನದಲ್ಲಿ ಪ್ರತಿಷ್ಠಿತ ಕ್ರಿಕೆಟ್ ಸಾಯಿರಾಜ್ ಟ್ರೋಫಿಗೆ ಇಂದು ದಕ್ಷಿಣ ಶಾಸಕ ಅಭಯ್ ಪಾಟೀಲ್ ಅವರು ಚಾಲನೆಯನ್ನು ನೀಡಿದರು. ಈ ಸಂದರ್ಭದಲ್ಲಿ ಮಹಾಪೌರ ಮಂಗೇಶ್ ಪವಾರ್, ಉಪಮಹಾಪೌರ ವಾಣಿ ಜೋಷಿ ಸೇರಿದಂತೆ ಇನ್ನುಳಿದ ಗಣ್ಯರು ಉಪಸ್ಥಿತರಿದ್ಧರು.
ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸಲು ಮತ್ತು ನಗರದಲ್ಲಿ ಕ್ರೀಡಾ ಮನೋಭಾವವನ್ನು ಉತ್ತೇಜಿಸಲು ಈ ಪಂದ್ಯಾವಳಿಯು ಉತ್ತಮ ವೇದಿಕೆಯಾಗಿದೆ ಎಂದು ಶಾಸಕ ಅಭಯ್ ಪಾಟೀಲ್ ಹೇಳಿದರು.
ಭಾಗವಹಿಸುವ ಎಲ್ಲ ತಂಡಗಳಿಗೆ ಶುಭ ಕೋರಿದ ಗಣ್ಯರು, ಆಟಗಾರರು ಉತ್ಸಾಹ ಸಮರ್ಪಣೆ
ಮತ್ತು ನಿಜವಾದ ಕ್ರೀಡಾ ಸ್ಫೂರ್ತಿಯೊಂದಿಗೆ ಆಡಬೇಕು ಎಂದು ಹಾರೈಸಿದರು. ಈ ಕ್ರೀಡಾಕೂಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ತೊಡಗಿ ಆರೋಗ್ಯಕರ ಹಾಗೂ ಬಲಿಷ್ಠ ಬೆಳಗಾವಿ ನಿರ್ಮಾಣಕ್ಕೆ ಕೊಡುಗೆ ನೀಡಲಿ ಎಂದು ಆಶಿಸಿದರು.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ