Breaking News

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Spread the love

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ನವೆಂಬರ್ 28ರಂದು ನಡೆಯಲಿರುವ ಐಸಿಡಿಎಸ್ ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ
ಬೆಂಗಳೂರು: ನವೆಂಬರ್ 28 ರಂದು ಅರಮನೆ ಮೈದಾನದಲ್ಲಿ ನಡೆಯಲಿರುವ ಐಸಿಡಿಎಸ್ ಸುವರ್ಣ ಮಹೋತ್ಸವ, ಅಕ್ಕ ಪಡೆ ಲೋಕಾರ್ಪಣೆ, ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘದ ಉದ್ಘಾಟನಾ ಸಮಾರಂಭಕ್ಕೆ ಎಐಸಿಸಿ ಅಧ್ಯಕ್ಷರು ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಆಹ್ವಾನ ನೀಡಿದರು.
ಸದಾಶಿವ ನಗರದಲ್ಲಿರುವ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಅಧಿಕಾರಿಗಳೊಂದಿಗೆ ತೆರಳಿದ ಸಚಿವರು, ಅಂದಿನ ಐತಿಹಾಸಿಕ ಕಾರ್ಯಕ್ರಮಕ್ಕೆ ಆಗಮಿಸಬೇಕು ಎಂದು ಆಹ್ವಾನ ಪತ್ರಿಕೆ ನೀಡಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ನಮ್ಮ ಪಕ್ಷದ ವರಿಷ್ಠ ರಾಹುಲ್ ಗಾಂಧಿಯವರು ಕಾರ್ಯಕ್ರಮಕ್ಕೆ ಆಗಮಿಸುವ ಸಾಧ್ಯತೆಗಳಿದ್ದು, ಈ ಕುರಿತು ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಮಾತನಾಡಿರುವುದಾಗಿ ತಿಳಿಸಿದರು.

Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ