Breaking News

ಲಿವ್‌-ಇನ್‌ ಸಂಬಂಧಕ್ಕೂ ಐಪಿಸಿ 498ಎ ಅನ್ವಯ: ಹೈಕೋರ್ಟ್‌

Spread the love

ಬೆಂಗಳೂರು: ಐಪಿಸಿ 498ಎ (ವಿವಾಹಿತ ಮಹಿಳೆಯ ಮೇಲೆ ಕ್ರೌರ್ಯ ಮತ್ತು ಕಿರುಕುಳ) ಕಾನೂನುಬದ್ಧವಾಗಿ ವಿವಾಹವಾಗಿರುವ ಪತಿಗೆ ಮಾತ್ರ ಸೀಮಿತವಾಗದೆ, ಮದುವೆಯ ಗುಣಲಕ್ಷಣಗಳನ್ನು ಹೊಂದಿರುವ ಲಿವ್‌–ಇನ್‌(ಪುರುಷ-ಮಹಿಳೆ ವಿವಾಹವಾಗದೆ ಒಟ್ಟಿಗೆ ಇರುವುದು) ಸಂಬಂಧಗಳಿಗೂ ಅನ್ವಯವಾಗುತ್ತದೆ ಎಂದು ಹೈಕೋರ್ಟ್‌ ಇಂದು ಮಹತ್ವದ ಆದೇಶ ನೀಡಿತು.

ಮಹಿಳೆಯೊಬ್ಬರು(ಎರಡನೇ ಪತ್ನಿ) ದಾಖಲಿಸಿದ್ದ ಎರಡು ಪ್ರತ್ಯೇಕ ಪ್ರಕರಣಗಳನ್ನು ರದ್ದು ಮಾಡುವಂತೆ ಕೋರಿ ಶಿವಮೊಗ್ಗದ ಡಾ.ಬಿ.ಎಚ್‌.ಲೋಕೇಶ್‌ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜು ಅವರಿದ್ದ ಪೀಠ ಈ ಆದೇಶ ನೀಡಿದೆ.

ಈ ಪ್ರಕರಣದಲ್ಲಿ ಅರ್ಜಿದಾರರು ಮತ್ತು ದೂರುದಾರರು ವೈವಾಹಿಕವಾಗಿ ಒಂದಾಗುವಂತಹ ಎಲ್ಲ ಲಕ್ಷಣಗಳನ್ನು ಹೊಂದಿದ್ದು, ಒಟ್ಟಾಗಿ ನೆಲೆಸಿ, ಸಹಬಾಳ್ವೆಯಿಂದ ನಡೆದುಕೊಂಡು ಪತಿ-ಪತ್ನಿ ಎಂಬುದಾಗಿ ಗುರುತಿಸಿಕೊಂಡು ಸಾಮಾಜಿಕ ಜವಾಬ್ದಾರಿಗಳನ್ನು ನಿರ್ವಹಿಸಿರುವುದು ಸ್ಪಷ್ಟವಾಗಿದೆ. ಹೀಗಾಗಿ ಪತಿ-ಪತ್ನಿಯ ಹೊಂದಾಣಿಕೆಯಂತೆ ತೋರುವ ಈ ಸಂಬಂಧಕ್ಕೂ ಕ್ರೌರ್ಯ ನೀಡಿರುವುದು ಸಾಬೀತಾದಲ್ಲಿ ಐಪಿಸಿ ಸೆಕ್ಷನ್ 498(ಎ) ಅಡಿ ರಕ್ಷಣೆ ದೊರೆಯಲಿದೆ. ಈ ರೀತಿಯ ಆರೋಪವಿರುವ ಪ್ರಕರಣಗಳಲ್ಲಿ ಕಾನೂನುಬದ್ದ ಪತಿ-ಪತ್ನಿಯ ಸಂಬಂಧ ಹೊಂದಿರಬೇಕು ಎಂಬ ಅವಶ್ಯಕತೆ ಇಲ್ಲ ಎಂದು ಪೀಠ ಸ್ಪಷ್ಟಪಡಿಸಿದೆ.

ಆರೋಪಿಯಾಗಿರುವ ಅರ್ಜಿದಾರರು ದೂರುದಾರರನ್ನು ಮೊದಲನೇ ಮದುವೆಯಾದ ಬಳಿಕ ಎರಡನೇ ಮದುವೆಯಾಗಿ ದುರುದ್ದೇಶದಿಂದ ವರ್ತಿಸಿದ್ದಾರೆ. ಬಳಿಕ ಮದುವೆಯಾಗಿಲ್ಲ ಎಂಬ ಕಾರಣ ನೀಡಿ ತನ್ನ ತಪ್ಪಿನಿಂದ ನುಣುಚಿಕೊಳ್ಳುವುದಕ್ಕೆ ಮುಂದಾಗಿದ್ದು ಅದಕ್ಕೆ ಅವಕಾಶ ನೀಡುವುದಿಲ್ಲ ಎಂದು ಪೀಠ ತಿಳಿಸಿತು.

ಅರ್ಜಿದಾರರು ಈಗಾಗಲೇ ಮದುವೆಯಾಗಿ ಮಗುವನ್ನು ಹೊಂದಿದ್ದರೂ, ಈ ಅಂಶವನ್ನು ಮರೆಮಾಚಿ ದೂರುದಾರ ಮಹಿಳೆಯೊಂದಿಗೆ ನೆಲೆಸಿದ್ದಾರೆ. ದೂರುದಾರರ ಕುಟುಂಬದಿಂದ ಚಿನ್ನಾಭರಣ ಮತ್ತು ಹಣ ಪಡೆದುಕೊಂಡಿದ್ದಾರೆ ಎಂಬ ಆರೋಪವಿದೆ. ದೂರುದಾರ ಮಹಿಳೆಗೆ ಮತ್ತಷ್ಟು ಹಣದ ಬೇಡಿಕೆಯಿಟ್ಟು ಕಿರುಕುಳ ನೀಡಿ ಹಿಂಸೆಗೆ ಒಳಪಡಿಸಲಾಗಿದೆ. ಇದೇ ಕಾರಣದಿಂದ ದೂರುದಾರರು ಆತ್ಮಹತ್ಯೆಗೂ ಯತ್ನಿಸಿದ್ದಾರೆ. ಈ ಅಂಶಗಳು ನ್ಯಾಯಪೀಠದ ಮುಂದಿರುವಾಗ ಅರ್ಜಿದಾರರು ದೂರುದಾರರನ್ನು ಕಾನೂನುಬದ್ಧವಾಗಿ ವಿವಾಹವಾಗಿಲ್ಲ ಎಂಬ ವಾದ ಅಂಗೀಕರಿಸಿದರೆ ಅದು ಅನ್ಯಾಯವಾಗುತ್ತದೆ ಎಂದು ಕೋರ್ಟ್ ಹೇಳಿದೆ.


Spread the love

About Laxminews 24x7

Check Also

ನನ್ನಿಂದಲೇ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ’ ಅನ್ನೋದನ್ನು ನಾನು ಒಪ್ಪಲ್ಲ: ಡಿಕೆಶಿಗೆ ಸತೀಶ್​ ಜಾರಕಿಹೊಳಿ ಟಾಂಗ್​

Spread the loveಬೆಳಗಾವಿ: ಕೆಲವೇ ಜನರಿಂದ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ ಎಂಬುದನ್ನು ನಾನು ಕೂಡಾ ಒಪ್ಪುವುದಿಲ್ಲ. ನಮಗಿರುವ 1 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ