Breaking News

ಅಧಿಕಾರ ಹಂಚಿಕೆ ಗೊಂದಲದ ಮಧ್ಯೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಎಕ್ಸ್​ನಲ್ಲಿ ಮಾಡಿದ ‘ಕೊಟ್ಟ ಮಾತು’ ಪೋಸ್ಟ್ ಕುತೂಹಲ ಹೆಚ್ಚಿಸಿದೆ.

Spread the love

ಬೆಂಗಳೂರು: ‘ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ’ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸಿಂಗಲ್ ಲೈನ್ ಎಕ್ಸ್​ ಪೋಸ್ಟ್ ಮಾಡಿದ್ದಾರೆ. ಅಧಿಕಾರ ಹಂಚಿಕೆಯ ಗೊಂದಲದ ಮಧ್ಯೆ ಡಿಸಿಎಂ ಮಾಡಿರುವ ಈ ಪೋಸ್ಟ್ ಮಹತ್ವ ಪಡೆದುಕೊಂಡಿದೆ. ಈ ಸಿಂಗಲ್ ಲೈನ್ ಪೋಸ್ಟ್ ಹಲವು ಕುತೂಹಲ ಹುಟ್ಟುಹಾಕುವ ಜೊತೆಗೆ ಡಿ.ಕೆ.ಶಿವಕುಮಾರ್ ಹಲವರಿಗೆ ಸಂದೇಶ ಕಳುಹಿಸಿದ್ದಾರಾ ಎಂಬ ಪ್ರಶ್ನೆಗಳು ಮೂಡಿದೆ.‌

ಎಕ್ಸ್ ಪೋಸ್ಟ್​ನಲ್ಲಿ ವರ್ಡ್ ಪವರ್ ಈಸ್ ವರ್ಲ್ಡ್ ಪವರ್ ( Word Power is World Power) ಸಂದರ್ಭ ಸೂಚಕ ಪದ ಸೃಷ್ಠಿಸಿದ ಡಿಕೆಶಿ, ಕೊಟ್ಟ ಮಾತನ್ನು ಉಳಿಸಿಕೊಳ್ಳುವುದು ಜಗತ್ತಿನ‌ ಅತ್ಯಂತ ದೊಡ್ಡ ಶಕ್ತಿ ಎಂದು ಸೂಚ್ಯವಾಗಿ ತಿಳಿಸಿದ್ದಾರೆ.‌

ನ್ಯಾಯಮೂರ್ತಿಗಳಾಗಲಿ, ರಾಷ್ಟ್ರಪತಿಗಳಾಗಲಿ, ನಾನು ಅಥವಾ ಬೇರೆ ಯಾರೇ ಆಗಲಿ ಪ್ರತಿಯೊಬ್ಬರು ನುಡಿದಂತೆ ನಡೆಯಬೇಕು. ಮಾತಿನ ಶಕ್ತಿ ವಿಶ್ವದ ಶಕ್ತಿ ಎಂದು ಒತ್ತಿ ಹೇಳುವ ಮೂಲಕ ನುಡಿದಂತೆ ನಡೆಯಬೇಕು ಎಂಬುದನ್ನು ಸ್ಪಷ್ಟವಾಗಿ ಹೇಳಿದ್ದಾರೆ. ಆ ಮೂಲಕ ಮಾತು ತಪ್ಪಬಾರದು ಎಂದು ನೆನಪಿಸುವ ಪ್ರಯತ್ನ ಮಾಡಿದ್ದಾರೆ ಎಂದು ವ್ಯಾಖ್ಯಾನಿಸಲಾಗುತ್ತಿದೆ.

ಈ ವಾರ ಹೈಕಮಾಂಡ್ ದೆಹಲಿಯಲ್ಲಿ ರಾಜ್ಯದ ಅಧಿಕಾರ ಹಂಚಿಕೆ ಗೊಂದಲ ಬಗ್ಗೆ ಸಭೆ ನಡೆಸಲಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಚರ್ಚಿಸಿ ಇಂದು ಅಂತಿಮ ತೀರ್ಮಾನಕ್ಕೆ ಬರುವ ಸಾಧ್ಯತೆ ಇದೆ. ಈ ಸಂಬಂಧ ಸಿಎಂ ಹಾಗೂ ಡಿಸಿಎಂಗೆ ಬುಲಾವ್ ನೀಡಲಿದ್ದಾರೆ ಎನ್ನಲಾಗಿದೆ.

ನವೆಂಬರ್ ಕ್ರಾಂತಿಗೆ ಇಂಬು ನೀಡುವಂತೆ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ನಾಯಕತ್ವ ಬದಲಾವಣೆಯ ವಿಚಾರ ತೀವ್ರ ಸ್ವರೂಪ ಪಡೆದಿದೆ. ದೆಹಲಿ ಅಂಗಳಕ್ಕೆ ತಲುಪಿರುವ ರಾಜ್ಯ ಕಾಂಗ್ರೆಸ್ ಪವರ್ ಫೈಟ್ ಇದೀಗ ಅಂತಿಮ‌ ಘಟ್ಟಕ್ಕೆ ತಲುಪಿದೆ. ಸದ್ಯದಲ್ಲೇ ಉಭಯ ನಾಯಕರನ್ನು ಕರೆಸಿ ಪಟ್ಟದ ಗೊಂದಲವನ್ನು ಹೈಕಮಾಂಡ್ ಬಗೆಹರಿಸಲಿದೆ.

ಮೂರು ನಾಲ್ಕು ದಿನಗಳ ಕಾಲ ಬೆಂಗಳೂರಲ್ಲಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಜೊತೆ ಮಾತುಕತೆ ನಡೆಸಿದ್ದಾರೆ. ಸದ್ಯ ಎಐಸಿಸಿ ಮಲ್ಲಿಕಾರ್ಜುನ ಖರ್ಗೆ ದೆಹಲಿಗೆ ತೆರಳಿದ್ದು, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಅವರಿಗೆ ರಾಜ್ಯ ರಾಜಕೀಯದ ಬಗ್ಗೆ ಮಾಹಿತಿ ನೀಡಲಿದ್ದಾರೆ.‌

ರಾಜ್ಯ ಸರ್ಕಾರದಲ್ಲಿನ ಅಧಿಕಾರ ಹಂಚಿಕೆ ಗೊಂದಲದ ಬಗ್ಗೆ ಎರಡು ದಿನದಲ್ಲಿ ಹೈಕಮಾಂಡ್ ಸಭೆ ಇದೆ.‌ ಆಗ ಮಾತನಾಡಿ ಅಂತಿಮ ನಿರ್ಧಾರ ಮಾಡುತ್ತಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರಿಲ್ಲಿ ಬುಧವಾರ ತಿಳಿಸಿದ್ದರು.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ