Breaking News

ಸಿಎಂ-ಡಿಸಿಎಂ 3-4 ಜನರನ್ನು ದೆಹಲಿಗೆ ಕರೆಸಿ ಮಾತನಾಡುತ್ತೆ; ಖರ್ಗೆ…

Spread the love

ಸಿಎಂ-ಡಿಸಿಎಂ 3-4 ಜನರನ್ನು ದೆಹಲಿಗೆ ಕರೆಸಿ ಮಾತನಾಡುತ್ತೆ; ಖರ್ಗೆ…
ಹೈಕಮಾಂಡ್ ಕರೆದರೇ ಖಂಡಿತವಾಗಿಯೂ ದೆಹಲಿ ಪ್ರವಾಸ; ಸಿಎಂ ಸಿದ್ಧರಾಮಯ್ಯ
ಸಿಎಂ-ಡಿಸಿಎಂ 3-4 ಜನರನ್ನು ದೆಹಲಿಗೆ ಕರೆಸಿ ಮಾತನಾಡುತ್ತೆ;
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ
ಹೈಕಮಾಂಡ್ ಕರೆದರೇ ಖಂಡಿತವಾಗಿಯೂ ದೆಹಲಿ ಪ್ರವಾಸ
ಸಿಎಂ ಸಿದ್ಧರಾಮಯ್ಯ ಪ್ರತಿಕ್ರಿಯೆ
ಪವರ್ ಶೇರಿಂಗ್ ವಿಚಾರಕ್ಕೆ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆ ಶುರುವಾಗಿದೆ. ಈ ಹಿನ್ನೆಲೆ ಸಿಎಂ ಡಿಸಿಎಂ ಸೇರಿದಂತೆ 3-4 ಜನರನ್ನು ದೆಹಲಿಗೆ ಕರೆಯಿಸಿ ಮಾತನಾಡುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದು, ಸಿಎಂ ಸಿದ್ಧರಾಮಯ್ಯ ಅವರು ಹೈಕಮಾಂಡ್ ದೆಹಲಿಗೆ ಕರೆದರೇ ಖಂಡಿತವಾಗಿಯೂ ದೆಹಲಿಗೆ ಹೋಗುವುದಾಗಿ ತಿಳಿಸಿದ್ದಾರೆ.
ಇಂದು ಬೆಂಗಳೂರಿನ ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಿಎಂ ಸಿದ್ಧರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ 3-4 ಜನರನ್ನು ದೆಹಲಿಗೆ ಕರೆಯಿಸಿ ಮಾತನಾಡುತ್ತೇನೆ. ಮುಂದೇ ಯಾವ ರೀತಿ ನಡೆದುಕೊಳ್ಳಬೇಕೆಂದು ತಿರ್ಮಾಣ ಮಾಡುತ್ತೇನೆ ಎಂದು ದೆಹಲಿಗೆ ಹೋಗುವ ಮುನ್ನ ಹೇಳಿದ್ದಾರೆ.
ಇನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ದೆಹಲಿ ಪ್ರವಾಸದ ಬೆನ್ನಲ್ಲೇ ನಮ್ಮನ್ನು ದೆಹಲಿಗೆ ಕರೆದರೇ ಹೋಗುವುದಾಗಿ ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು. ಹೈಕಮಾಂಡ್ ನಾಯಕರು ನಮ್ಮನ್ನು ಕರೆದರೇ ದೆಹಲಿಗೆ ಹೋಗುವುದಾಗಿ ಸಿಎಂ ಸಿದ್ಧರಾಮಯ್ಯ ಮೂರು ಬಾರಿ ಒತ್ತಿ ಒತ್ತಿ ಹೇಳಿದ್ದಾರೆ.

Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ