ಸರ್ಕಾರದ ಕಾರ್ಯವೈಖರಿ ಮತ್ತು ರೈತರ ಸಮಸ್ಯೆಗಳ ನಿರ್ಲಕ್ಷ್ಯಕ್ಕೆ ಖಂಡನೆ
ಬಾಗಲಕೋಟೆಯಲ್ಲಿ ಬಿಜೆಪಿ ಪ್ರತಿಭಟನೆ
ರೈತರ ಬೆಂಬಲಿಸಿ ಸರ್ಕಾರದ ವಿರುದ್ಧ ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ.
ಬಿಜೆಪಿ ಕಚೇರಿಯಿಂದ ಡಿಸಿ ಕಚೇರಿವರೆಗೆ ಪಾದಯಾತ್ರೆ ಮೆರವಣಿಗೆ.
ಚಿತ್ರದುರ್ಗ ಸಂಸದ ಗೋವಿಂದ್ ಕಾರಜೋಳ,
ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ನೇತೃತ್ವದಲ್ಲಿ ನಡೆದ ಪ್ರತಿಭಟನೆ.
ರಾಜ್ಯ ಸರ್ಕಾರದ ಕಾರ್ಯವೈಖರಿ ಮತ್ತು ರೈತರ ಸಮಸ್ಯೆಗಳ ನಿರ್ಲಕ್ಷ್ಯವನ್ನು ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ನವನಗರದಲ್ಲಿರುವ ಡಿಸಿ ಕಚೇರಿ ಆವರಣದಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಸಲಾಯಿತು.
ಚಿತ್ರದುರ್ಗ ಸಂಸದ ಗೋವಿಂದ್ ಕಾರಜೋಳ ಮತ್ತು ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಅವರ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ನೂರಾರು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು. ಜಿಲ್ಲಾ ಬಿಜೆಪಿ ಕಚೇರಿಯಿಂದ ಡಿಸಿ ಕಚೇರಿಯವರೆಗೆ ಪಾದಯಾತ್ರೆ ಮೆರವಣಿಗೆ ಮೂಲಕ ಸಾಗಿದ ಪ್ರತಿಭಟನಾಕಾರರು, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಡಿಸಿ ಕಚೇರಿ ಆವರಣದಲ್ಲಿ ಜಮಾಯಿಸಿದ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು, ರಾಜ್ಯ ಸರ್ಕಾರದ ಕಾರ್ಯ ವೈಖರಿಗೆ ಧಿಕ್ಕಾರ ಕೂಗಿ ತಮ್ಮ ಆಕ್ರೋಶವನ್ನು ಹೊರಹಾಕಿದರು. ರೈತರ ಬೆಳೆ ಹಾನಿಗೆ ಸಮರ್ಪಕ ಪರಿಹಾರ ವಿತರಿಸುವಂತೆ, ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಘೋಷಣೆ ಮಾಡುವಂತೆ ಹಾಗೂ ಜಿಲ್ಲೆಯಲ್ಲಿ ತಕ್ಷಣವೇ ಮೆಕ್ಕೆಜೋಳ ಖರೀದಿ ಕೇಂದ್ರಗಳನ್ನು ಆರಂಭಿಸುವಂತೆ ಪ್ರಮುಖವಾಗಿ ಆಗ್ರಹಿಸಿದರು.
ಪ್ರತಿಭಟನೆಯ ಕೊನೆಯಲ್ಲಿ ಸಂಸದ ಗೋವಿಂದ್ ಕಾರಜೋಳ ಅವರು ಜಿಲ್ಲಾಧಿಕಾರಿ ಸಂಗಪ್ಪ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ರೈತರ ಬೇಡಿಕೆಗಳನ್ನು ಒಳಗೊಂಡ ಮನವಿಯನ್ನು ಸಲ್ಲಿಸಿದರು. ರೈತರ ಸಂಕಷ್ಟಕ್ಕೆ ಸರ್ಕಾರ ಕೂಡಲೇ ಸ್ಪಂದಿಸದಿದ್ದರೆ, ಮುಂದಿನ ದಿನಗಳಲ್ಲಿ ಉಗ್ರ ಹೋರಾಟವನ್ನು ನಡೆಸುವುದಾಗಿ ಈ ಸಂದರ್ಭದಲ್ಲಿ ಬಿಜೆಪಿ ನಾಯಕರು ಎಚ್ಚರಿಕೆ ನೀಡಿದರು.
Laxmi News 24×7