Breaking News

3 ದಿನಗಳ ಕಾಲ ಉತ್ತರ ಕರ್ನಾಟಕದ 3 ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ. B.S.Y.

Spread the love

ಬೆಂಗಳೂರು – ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇದೇ 9ರಿಂದ 3 ದಿನಗಳ ಕಾಲ ಉತ್ತರ ಕರ್ನಾಟಕದ 3 ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ.

ಬೆಳಗಾವಿ, ಬೀದರ್ ಹಾಗೂ ರಾಯಚೂರು ಜಿಲ್ಲೆಗಳಿಗೆ ಯಡಿಯೂರಪ್ಪ ಪ್ರವಾಸ ಮಾಡಲಿದ್ದಾರೆ. ರಾಜ್ಯದಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯುವುದರಿಂದ ಯಡಿಯೂರಪ್ಪ ಪ್ರವಾಸ ಹಮ್ಮಿಕೊಂಡಿದ್ದಾರೆ.

ಇದೇ ವೇಳೆ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಯಾವುದೇ ಸಂದರ್ಭದಲ್ಲಿ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಬಹುದೆಂಬ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಈ ಭಾಗದಲ್ಲಿ ಪ್ರವಾಸ ಹಮ್ಮಿಕೊಳ್ಳುತ್ತಿದ್ದು, ಪಕ್ಷ ಸಂಘಟನೆ ಜೊತೆಗೆ ಅಭಿವದ್ಧಿ ಕಾಮಗಾರಿ ಮೂಲಕ ಮತದಾರರನ್ನು ಸೆಳೆಯುವ ಯೋಚನೆಯನ್ನೂ ಹೊಂದಿದ್ದಾರೆ.

 


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ