Breaking News

ಹುಬ್ಬಳ್ಳಿ: ಇಡಿ ಅಧಿಕಾರಿಗಳೆಂದು ಹೇಳಿಕೊಂಡು ಬಂಗಾರ, ಹಣ ದೋಚಿದ ಆರೋಪಿಗಳನ್ನ ಬಂಧಿಸಿದ ಸಿಸಿಬಿ ಪೊಲೀಸರು

Spread the love

ಹುಬ್ಬಳ್ಳಿ: ಕಳೆದ ಒಂದು ವಾರದ ಹಿಂದೆ (ನವೆಂಬರ್ 19 ) ಇಡಿ ಅಧಿಕಾರಿಗಳೆಂದು ಹೇಳಿಕೊಂಡು, ಮೂರು ಕೋಟಿ ರೂಪಾಯಿಗೂ ಹೆಚ್ಚಿನ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿರುವ ಆರೋಪಿಗಳನ್ನು ಜಿಲ್ಲೆಯ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಹುಬ್ಬಳ್ಳಿಯ ಹಳೆ ಬಸ್ ನಿಲ್ದಾಣದ ಮುಂಭಾಗದಲ್ಲಿ ಐದಾರು ಅಪರಿಚಿತರು ಬಂದು ಚಿನ್ನದ ವ್ಯಾಪಾರಿಯೊಂದಿಗೆ ನಾವು ಇಡಿ ಅಧಿಕಾರಿಗಳೆಂದು ಹೇಳಿಕೊಂಡಿದ್ದಲ್ಲದೇ, ಅವರನ್ನು ಕಿಡ್ನ್ಯಾಪ್​ ಮಾಡಿ, ಬೆಳಗಾವಿಯತ್ತ ಕರೆದೊಯ್ದಿದ್ದಾರೆ. ನಂತರ ಚಿನ್ನದ ವ್ಯಾಪಾರಿಯಿಂದ 2.942 ಕೆಜಿ ಚಿನ್ನದ ಆಭರಣ, 2 ಲಕ್ಷ ರೂಪಾಯಿ ಹಣವನ್ನು ಅಪಹರಿಸಿಕೊಂಡು ಹೋಗಿದ್ದರು.ಈ ಕುರಿತು ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು, ಪ್ರಕರಣವನ್ನು ಬೆನ್ನಟ್ಟಿದ ಸಿಸಿಬಿ ಪೊಲೀಸರು, ಉತ್ತರ ಪ್ರದೇಶದ ಗೋರಖ್​​ಪುರದಲ್ಲಿ ನಾಲ್ಕು ಜನ ಆರೋಪಿಗಳನ್ನು ಬಂಧಿಸಿದ್ದಾರೆ.ಬಂಧಿತರನ್ನು ಅಂಕುಶ ಕದಂ, ಚಂದ್ರಶೇಖರ್, ಜಿಗ್ನೇಶ್ ಕುಮಾರ್, ವಿಲಾಸ್ ಎಂದು ಗುರುತಿಸಲಾಗಿದ್ದು, ಬಂಧಿತರಿಂದ 56.26 ಗ್ರಾಂ ಚಿನ್ನ ಮತ್ತು 60,000 ರೂ ಹಣ, 7 ಮೊಬೈಲ್ ಜಪ್ತಿ ಮಾಡಿಕೊಂಡಿದ್ದಾರೆ. ಇನ್ನುಳಿದ ಆರೋಪಿಗಳು ತಲೆಮರೆಸಿಕೊಂಡಿದ್ದು, ಉಳಿದ ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ