ಬೆಳಗಾವಿ: ರೈತರು ಮತ್ತು ಉತ್ತರ ಕರ್ನಾಟಕ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿ ರಾಜ್ಯ ಸರ್ಕಾರದ ವಿರುದ್ಧ ಡಿ.9ರಂದು ಬೆಳಗಾವಿಯಲ್ಲಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್ ಅವರ ನೇತೃತ್ವದಲ್ಲಿ ದೊಡ್ಡ ಹೋರಾಟ ಮಾಡಲು ತೀರ್ಮಾನಿಸಿದ್ದೇವೆ. ಸುಮಾರು 20 ಸಾವಿರ ರೈತರು ಸೇರಲಿದ್ದಾರೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಬೆಳಗಾವಿ ಖಾಸಗಿ ಹೋಟೆಲ್ನಲ್ಲಿ ಬುಧವಾರ ಬೆಳಗಾವಿ ಜಿಲ್ಲಾ ಮಟ್ಟದ ಕೋರ್ ಕಮಿಟಿ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.
ಪೊಲೀಸರು ನಮಗೆ ಎಲ್ಲಿ ಅನುಮತಿ ಕೊಡುತ್ತಾರೋ ಅಲ್ಲಿ ಪ್ರತಿಭಟನೆ ಮಾಡುತ್ತೇವೆ. ಕನಿಷ್ಠ ಮೂರು ಕಿ.ಮೀ ಪಾದಯಾತ್ರೆ ಮಾಡಲು ಚಿಂತನೆ ಮಾಡುತ್ತಿದ್ದೇವೆ ಎಂದರು. ಇದೇ ವೇಳೆ, ಗ್ರಾಮ ವಾಸ್ತವ್ಯ ಮಾಡುವ ಬಗ್ಗೆ ಸ್ಪಷ್ಟತೆ ಇಲ್ಲ. ಆ ಕುರಿತು ಚರ್ಚೆ ಆಗಿಲ್ಲ ಎಂದು ತಿಳಿಸಿದರು.
ರಾಜ್ಯ ಸರ್ಕಾರ ಕುರ್ಚಿ ಉಳಿಸಿಕೊಳ್ಳಲು ಕಾಲ ಕಳೆಯುತ್ತಿದೆ. ರೈತರ ಸಮಸ್ಯೆ ಪರಿಹರಿಸಲು ಗಮನ ಕೊಡುತ್ತಿಲ್ಲ. ಹಿಂದೆ ಬೊಮ್ಮಾಯಿಯವರು ಸಿಎಂ ಆಗಿದ್ದಾಗ ಐದು ಸಾವಿರ ಕೋಟಿ ನೀರಾವರಿ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡಿದ್ದರು. ಆದರೆ, ಆ ಯೋಜನೆಗಳಿಗೆ ಅನುದಾನ ತಡೆ ಹಿಡಿದಿದ್ದಾರೆ ಎಂದು ಜಾರಕಿಹೊಳಿ ಆರೋಪಿಸಿದರು.
Laxmi News 24×7