Breaking News

ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧದ ಸಮನ್ಸ್​ಗೆ ಹೈಕೋರ್ಟ್ ತಡೆ (

Spread the love

ಬೆಂಗಳೂರು: ಕಳೆದ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಸುಳ್ಳು ಹೇಳಿಕೆ ನೀಡಿ ಚುನಾವಣಾ ನೀತಿ ಸಂಹಿತೆ ಉಲ್ಲಘನೆ ಮಾಡಿದ ಆರೋಪ ಪ್ರಕರಣದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮನ್ಸ್ ನೀಡಿದ್ದ ವಿಚಾರಣಾ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ವಿಚಾರಣಾ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿರುವ ಕ್ರಮವನ್ನು ಪ್ರಶ್ನಿಸಿ ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರಿದ್ದ ಏಕ ಸದಸ್ಯಪೀಠ ಈ ಮಧ್ಯಂತರ ಆದೇಶ ನೀಡಿದೆ. ಅಲ್ಲದೇ, ನಗರದ 42 ನೇ ಎಸಿಜೆಎಂ ಕೋರ್ಟ್​ನಲ್ಲಿ ನಡೆಯುತ್ತಿರುವ ವಿಚಾರಣೆ ಮತ್ತು ಆ ಸಂಬಂಧದ ಎಲ್ಲಾ ಪ್ರಕ್ರಿಯೆಗಳಿಗೆ ಮಧ್ಯಂತರ ತಡೆ ನೀಡಿತು. ರಾಜ್ಯ ಸರಕಾರ ಮತ್ತು ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗೆ ನೋಟಿಸ್ ಜಾರಿಗೊಳಿಸಿ, ಆಕ್ಷೇಪಣೆ ಸಲ್ಲಿಸುವಂತೆ ಸೂಚನೆ ನೀಡಿ ವಿಚಾರಣೆಯನ್ನು ಜನವರಿ ತಿಂಗಳ ಮೂರನೇ ವಾರಕ್ಕೆ ಮುಂದೂಡಿತು.

ವಿಚಾರಣೆ ವೇಳೆ ಕುಮಾರಸ್ವಾಮಿ ಪರ ವಕೀಲರು, ಚುನಾವಣೆಯಲ್ಲಿ ಪ್ರತಿಸ್ಪರ್ಧಿಯ ಹೆಸರನ್ನು ಅರ್ಜಿದಾರರು ತಮ್ಮ ಹೇಳಿಕೆಯಲ್ಲಿ ಎಲ್ಲೂ ಉಲ್ಲೇಖಿಸಿಲ್ಲ. ಆದರೂ ಕೋರ್ಟ್ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ತಿರಸ್ಕರಿಸಿ ಸಮನ್ಸ್ ಜಾರಿಗೊಳಿಸಿದೆ. ಹಾಗಾಗಿ ಸಮನ್ಸ್​ಗೆ ತಡೆ ನೀಡಬೇಕು ಎಂದು ಕೋರಿದರು. ವಾದ ಆಲಿಸಿದ ಪೀಠ ಈ ಆದೇಶ ನೀಡಿದೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ