ಮಂಗಳೂರು: ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಅರೆಸ್ಟ್ ಎಂದು ಖದೀಮರು ಅಮಾಯಕರನ್ನು ವಂಚಿಸಿ ಕೋಟಿಗಟ್ಟಲೆ ಹಣ ವಂಚಿಸುತ್ತಿರುವುದು ಬೆಳಕಿಗೆ ಬರುತ್ತಲೇ ಇದೆ. ಈ ನಡುವೆ ಮಂಗಳೂರಿನಲ್ಲಿ ಬ್ಯಾಂಕ್ ಮ್ಯಾನೇಜರ್ ಸಮಯ ಪ್ರಜ್ಞೆಯಿಂದ ವಂಚಕರು ಹಿರಿಯ ದಂಪತಿಗಳನ್ನು ಡಿಜಿಟಲ್ ಅರೆಸ್ಟ್ ಮಾಡಿ ಹಣ ದೋಚುವುದನ್ನು ತಪ್ಪಿಸಲಾಗಿದೆ.
ಮುಲ್ಕಿಯ ದಾಮಸಕಟ್ಟೆ ನಿವಾಸಿಗಳಾದ ಬೆನ್ಡ್ಡಿಕ್ ಪೆರ್ನಾಂಡಿಸ್ (84 ವರ್ಷ) ಹಾಗೂ ಲಿಲ್ಲಿ ಸಿಸಿಲಿಯ ಫೆರ್ನಾಂಡಿಸ್ (71 ವರ್ಷ) ರವರಿಗೆ ಡಿಸೆಂಬರ್ 1 ರಂದು ಯಾರೋ ಅಪರಿಚಿತರು ಉತ್ತರ ಪ್ರದೇಶದ ಸಿ.ಐ.ಡಿ ಪೊಲೀಸ್ ಎಂಬ ಸೊಗಿನಲ್ಲಿ ಮೊಬೈಲ್ ಫೋನ್ ವಾಟ್ಸ್ಆ್ಯಪ್ ಮೂಲಕ ಸಂಪರ್ಕಿಸಿದ್ದರು. ಅವರುಗಳು 6 ಕೋಟಿ ಮೋಸ ಮಾಡಿರುವುದಾಗಿ ಅವರ ವಿರುದ್ದ ವಂಚನೆ ಪ್ರಕರಣ ದಾಖಲಾಗಿರುವುದಾಗಿ ನಂಬಿಸಿ, ಸೈಬರ್ ಕಳ್ಳರು ಡಿಜಿಟಲ್ ಅರೆಸ್ಟ್ಗೆ ಒಳಪಡಿಸಿದ್ದರು.
ತಮ್ಮ ಖಾತೆಯಲ್ಲಿರುವ ಹಣವನ್ನು ತನಿಖೆಗಾಗಿ ವರ್ಗಾಹಿಸಬೇಕೆಂದು ಸೂಚಿಸಿದ ಮೇರೆಗೆ ಇವರು ಕಿನ್ನಿಗೋಳಿಯ ಕೆನರಾ ಬ್ಯಾಂಕಿನಲ್ಲಿದ್ದ ಅವರ ಖಾತೆಯಿಂದ ಸುಮಾರು 84 ಲಕ್ಷ ರೂಪಾಯಿ ಹಣವನ್ನು ಸೈಬರ್ ಕಳ್ಳರು ಸೂಚಿಸಿದ ಬ್ಯಾಂಕ್ ಖಾತೆಗೆ ರವಾನಿಸಲು ಬ್ಯಾಂಕಿಗೆ ವೃದ್ದರು ಹೋಗಿದ್ದರು. ಈ ಸಮಯ ಕಿನ್ನಿಗೋಳಿಯ ಕೆನರಾ ಬ್ಯಾಂಕಿನ ಮ್ಯಾನೇಜರ್ ರಾಯಸ್ಟನ್ ಅವರು ದೊಡ್ಡ ಮೊತ್ತದ ಹಣವನ್ನು ಏಕೆ ವರ್ಗಾವಣೆ ಮಾಡುತ್ತಿದ್ದೀರಿ ಎಂದು ಕೇಳಿದ್ದಕ್ಕೆ ವೃದ್ದದಂಪತಿಗಳು ಸರಿಯಾದ ಉತ್ತರ ನೀಡಿರಲಿಲ್ಲ.
ಇದರಿಂದ ಸಂಶಯಗೊಂಡು, ಸೈಬರ್ ವಂಚಕರು ಒದಗಿಸಿದಂತಹ ಖಾತೆಗೆ ಹಣವನ್ನು ವರ್ಗಾವಣೆ ಮಾಡದೇ, ಬ್ಯಾಂಕ್ ಮ್ಯಾನೇಜರ್ ಕಿನ್ನಿಗೋಳಿ ಪರಿಸರದ ಪೊಲೀಸ್ ಬೀಟ್ ಸಿಬ್ಬಂದಿಯಾದ ಯಶವಂತ ಕುಮಾರ ಹಾಗೂ ಠಾಣಾ ಗುಪ್ತವಾರ್ತೆ ಸಿಬ್ಬಂದಿ ಕಿಶೋರ್ ಅವರಿಗೆ ದೂರವಾಣಿ ಕರೆ ಮಾಡಿ ಈ ಬಗ್ಗೆ ತಿಳಿಸಿದ್ದರು.
Laxmi News 24×7