Breaking News

ಜಿಲ್ಲಾಮಟ್ಟದ ಕ್ರೀಡಾ ಕೂಟದಲ್ಲಿ ಸಾಧನೆ ಮಾಡಿದ ಸಿಬ್ಬಂದಿಯನ್ನು ಅಭಿನಂದಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*

Spread the love

ಜಿಲ್ಲಾಮಟ್ಟದ ಕ್ರೀಡಾ ಕೂಟದಲ್ಲಿ ಸಾಧನೆ ಮಾಡಿದ ಸಿಬ್ಬಂದಿಯನ್ನು ಅಭಿನಂದಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*‎ಒಬ್ಬರು ಅಥವಾ ಹೆಚ್ಚಿನ ಜನರು ಮತ್ತು ‎ಪಠ್ಯ '‎ಭಾರ ಭಾರತೀಯು ಭಾರತೀಯುರಾಷ್ಷೀಯ್ ತೀಯು ರಾಷ್ಟೀಯ್ರ dumdawtu لب‎' ಹೇಳುತ್ತಿದೆ‎‎ ನ ಚಿತ್ರವಾಗಿರಬಹುದು
*ಗ್ರಾಮೀಣ ಕ್ಷೇತ್ರಕ್ಕೆ ಈ ವರ್ಷ ನೂರಾರು ಕೋಟಿ ರೂಪಾಯಿಗಳಷ್ಟು ಅನುದಾನ ತಂದಿದ್ದೇನೆ ಎಂದ ಸಚಿವೆ*
ಬೆಳಗಾವಿ: ಬೆಳಗಾವಿ ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲೆಯ ಗ್ರಾಮ ಪಂಚಾಯತ್ ಸಿಬ್ಬಂದಿಗೆ ಇತ್ತೀಚಿಗೆ ಏರ್ಪಡಿಸಿದ್ದ ಕ್ರೀಡಾಕೂಟದಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ ಬೆಳಗಾವಿ ತಾಲೂಕು ಸಿಬ್ಬಂದಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಶುಕ್ರವಾರ ಅಭಿನಂದಿಸಿದರು.ಒಬ್ಬರು ಅಥವಾ ಹೆಚ್ಚಿನ ಜನರು, ಡೈಸ್, ಆಸ್ಪತ್ರೆ ಮತ್ತು ಪಠ್ಯ ನ ಚಿತ್ರವಾಗಿರಬಹುದು
ಗೃಹ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಲ್ಲ ಸಿಬ್ಬಂದಿಯನ್ನು ಅಭಿನಂದಿಸಿ ಮಾತನಾಡಿದ ಸಚಿವರು, ದೈನಂದಿನ ಒತ್ತಡದ ನಡುವೆಯೂ ಕ್ರೀಡಾಕೂಟದಲ್ಲಿ ಭಾಗವಹಿಸಿ ಸಾಧನೆ ಮಾಡಿದ್ದೀರಿ. ಜೀವನಕ್ಕೆ ಕ್ರೀಡೆ ಬಹಳ ಅವಶ್ಯಕ. ನಮ್ಮನ್ನು ನಾವು ಪ್ರೀತಿಸಿದರೆ ಬೇರೆಯವರು ನಮ್ಮನ್ನು ಪ್ರೀತಿಸುತ್ತಾರೆ. ಹಾಗಾಗಿ ನಿತ್ಯ ಯೋಗ, ವ್ಯಾಯಾಮ ಮಾಡುವುದು ಅಗತ್ಯ. ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ನಮ್ಮ ಬೆಳಗಾವಿ ತಾಲೂಕು ಚಾಂಪಿಯನ್ ಆಗಿರುವುದು ಖುಷಿಯ ವಿಚಾರ ಎಂದರು.ಒಬ್ಬರು ಅಥವಾ ಹೆಚ್ಚಿನ ಜನರು ಮತ್ತು ಪಠ್ಯ ನ ಚಿತ್ರವಾಗಿರಬಹುದು
ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಭಿವೃದ್ಧಿಗೆ ಎಲ್ಲರ ಸಹಕಾರ ಬೇಕು. ನಾನು ಕೇವಲ ಗ್ರಾಮ ಪಂಚಾಯಿತಿಗಳ ಮೇಲೆ ಜವಾಬ್ದಾರಿ ಬಿಟ್ಟು ಕೂರುವವಳಲ್ಲ. ಸಮಗ್ರ ಅಭಿವೃದ್ಧಿಯೇ ನನ್ನ ಕನಸು. ಗ್ರಾಮೀಣ ಕ್ಷೇತ್ರಕ್ಕೆ ಈ ವರ್ಷ ನೂರಾರು ಕೋಟಿ ರೂಪಾಯಿಗಳಷ್ಟು ಅನುದಾನ ತಂದಿದ್ದೇನೆ. ಇದರಲ್ಲಿ ಒಂದಿಷ್ಟು ಟೆಂಡರ್‌ ಪ್ರಕ್ರಿಯೆ ಹಂತದಲ್ಲಿದೆ, ಈಗಾಗಲೇ 40 ಕೋಟಿ ರೂಪಾಯಿ ಮೊತ್ತದ ಕೆಲಸ ನಡೆಯುತ್ತಿದೆ. ಎಲ್ಲರೂ ಸೇರಿಕೊಂಡು ಕನಸಿನ ಬೆಳಗಾವಿ ಗ್ರಾಮೀಣ ಕ್ಷೇತ್ರ ರೂಪಿಸೋಣ. ಜಾತ್ಯತೀತ ನಿಲುವಿನಿಂದ ಕೆಲಸ ಮಾಡೋಣ ಎಂದು ಸಚಿವರು ಗ್ರಾಮ ಪಂಚಾಯಿತಿ ಸಿಬ್ಬಂದಿಗೆ ತಿಳಿಸಿದರು.ಪಠ್ಯ 'ಭಾರ ಬಾರ ತೀಯ တန္ဲစသော EETN' ಹೇಳುತ್ತಿದೆ ನ ಚಿತ್ರವಾಗಿರಬಹುದು
ಗ್ರಾಮೀಣ ಪ್ರದೇಶಗಳಲ್ಲಿ ಎಲ್ಲ ಮೂಲ ಸೌಕರ್ಯ ಕಲ್ಪಿಸಿ. ರಸ್ತೆ ಅಭಿವೃದ್ಧಿಗೆ ನಾನು ಹಣ ತರುತ್ತೇನೆ. ಚರಂಡಿ, ಲೈಟ್, ನೀರಿನ ಸಮಸ್ಯೆಗೆ ನೀವು ಸ್ಪಂದಿಸಿ. ಗ್ರಾಮಗಳ ನೈರ್ಮಲ್ಯ ಕಾಪಾಡಿ ಎಂದು ಹೇಳಿದರು.
ವಿಧಾನ ಪರಿಷತ್‌ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಜಿಲ್ಲಾಮಟ್ಟದ ಕ್ರೀಡಾ ಕೂಟದಲ್ಲಿ ಸಾಧನೆ ಮಾಡಿದ ಸಿಬ್ಬಂದಿಗೆ ಅಭಿನಂದನೆ ಸಲ್ಲಿಸಿದರು, ಬಳಿಕ ಮಾತನಾಡಿ 2018 ರಿಂದ 2023ರವರೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಾವಿರ ಕೋಟಿ ರೂಪಾಯಿಯಷ್ಟು ಅನುದಾನ ತಂದಿದ್ದು, ಇನ್ನೂ ಹೆಚ್ಚಿನ ಅನುದಾನವನ್ನು ಕ್ಷೇತ್ರಕ್ಕೆ ತರಲಿದ್ದಾರೆ. ಕ್ಷೇತ್ರಕ್ಕೆ ಅವರು ದೊಡ್ಡ ಆಸ್ತಿ ಎಂದರು.
ಈ ವೇಳೆ ಕಾಡಾ ಅಧ್ಯಕ್ಷರಾದ ಯುವರಾಜ ಕದಂ, ತಾಲೂಕ್‌ ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ಯಶವಂತ ಮುಂತಾದವರು ಉಪಸ್ಥಿತರಿದ್ದರು.

Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ