Breaking News

ತಂಬಾಕು ಕೊಟ್ಟಿಲ್ಲವೆಂದು ಜೈಲು ಸಿಬ್ಬಂದಿ ಮೇಲೆಯೇ ಹಲ್ಲೆ ಮಾಡಿದ ಕೈದಿಗಳು

Spread the love

ಕಾರವಾರ, ಡಿಸೆಂಬರ್ 06: ಉತ್ತರ ಕನ್ನಡ (Uttara Kannada) ಜಿಲ್ಲೆಯ ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳು ಮತ್ತು ಸಿಬ್ಬಂದಿ ನಡುವೆ ಕಾದಾಟವಾಗಿದ್ದು, ಮೂವರು ಸಿಬ್ಬಂದಿ ಮೇಲೆ ಕೈದಿಗಳು ದಾಳಿ ನಡೆಸಿದ ಘಟನೆ ಇಂದು ನಡೆದಿದೆ.  ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ ನಗರ ಠಾಣೆಯ ಪೊಲೀಸರು ತಕ್ಷಣ ಜೈಲಿಗೆ ದೌಡಾಯಿಸಿದ್ದುಪರಿಶೀಲನೆ ನಡೆಸಿದ್ದಾರೆ.

ಮೂವರು ಸಿಬ್ಬಂದಿ ಮೇಲೆ ದಾಳಿ ನಡೆಸಿದ ಕೈದಿಗಳು

ಕಾರವಾರ ಜೈಲಿನಲ್ಲಿ ತಂಬಾಕು ಮತ್ತು ಇನ್ನಿತರೆ ಮದಕ ವಸ್ತುಗಳ ಬಳಕೆಗೆ ಆಸ್ಪದ ನೀಡದ ಕಾರಣಕ್ಕೆ ಜೈಲಿನ ಮೂವರು ಸಿಬ್ಬಂದಿ ಮತ್ತು ಜೈಲರ್ ಮೇಲೆ ಕೈದಿಗಳು ಹಲ್ಲೆಗೆ ಮುಂದಾಗಿದ್ದರುದಾಳಿ ನಡೆಸಿದವರನ್ನು ಮಂಗಳೂರು ಮೂಲದ ಮೊಹಮ್ಮದ್ ಅಬ್ದುಲ್, ಫಯಾನ್ ಹಾಗೂ ಕೌಶಿಕ್ ನಿಹಾಲ್ ಎಂದು ಗುರುತಿಸಲಾಗಿದೆಘಟನೆ ತಿಳಿದ ಕೂಡಲೆ  20 ಕ್ಕೂ ಹೆಚ್ಚು ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದುಪರಿಸ್ಥಿತಿಯನ್ನು ಹಿಡಿತಕ್ಕೆ ತಂದಿದ್ದಾರೆ.

ಮಂಗಳೂರಿನಲ್ಲಿಯೂ IPS ಅಧಿಕಾರಿ ಮೇಲೆ ಹಲ್ಲೆ ಮಾಡಿದ್ದ ಆರೋಪಿ

ದಾಳಿ ಮಾಡಿದ ಮೂವರು ಕೈದಿಗಳಲ್ಲಿ ಆರೋಪಿ ಫಯಾನ್‌  ಹಿಂದೆಯೂ ಮಂಗಳೂರಿನ ಜೈಲಿನಲ್ಲಿ ದಾಳಿ ನಡೆಸಿದ್ದುಮೊಬೈಲ್ ಹಾಗೂ ತಂಬಾಕು ವಶಪಡಿಸಿಕೊಂಡಿದ್ದಕ್ಕೆ ಕೋಪಗೊಂಡ ಫಯಾನ್, ಅಂದಿನ ಮಂಗಳೂರು ಪೊಲೀಸ್ ಕಮಿಷನರ್ ಹಾಗೂ IPS ಅಧಿಕಾರಿ ಶಶಿಕುಮಾರ್ ಅವರ ಮೇಲೆ ಹಲ್ಲೆ ನಡೆಸಿದ್ದ. ಇಂದು ಮತ್ತೆ ಕಾರವಾರ ಜೈಲಿನಲ್ಲೂ ತಂಬಾಕಿಗಾಗಿ ಜೈಲರ್ ಹಾಗೂ ಮೂವರು ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವುದು ಆತಂಕ ಹುಟ್ಟಿಸಿದೆ.


Spread the love

About Laxminews 24x7

Check Also

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.

Spread the loveಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ