ನಿಪ್ಪಾಣಿ ನಗರದಲ್ಲಿ ಪೋಲಿಸ್ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಳ್ಳತನದ ಘಟನೆಗಳು ಹೆಚ್ಚುತ್ತಿದ್ದು ಅದನ್ನು ತಡೆಯಲು ಪೊಲೀಸ್ ಆಡಳಿತವು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಪೊಲೀಸ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.
ನಗರದಲ್ಲಿ ಕಳ್ಳತನ ಹೆಚ್ಚುತ್ತಿದ್ದು ಪೊಲೀಸ್ ಇಲಾಖೆ ನಿಖರವಾಗಿ ಕೆಲಸ ಮಾಡುತ್ತಿಲ್ಲ. ಸಿಸಿಟಿವಿ ಕ್ಯಾಮೆರಾಗಳು ಕಾರ್ಯನಿರ್ವಹಿಸುತ್ತಿಲ್ಲ, ಪೊಲೀಸ್ ಇಲಾಖೆ ಮತ್ತು ನಗರಸಭೆ ಸಮನ್ವಯ ಸಾಧಿಸುವ ಮೂಲಕ ಸಿಸಿ ಕ್ಯಾಮೆರಾಗಳನ್ನು ಅಳವಡಿಸಬೇಕು.ಅಗತ್ಯವಿದ್ದರೆ ಪೊಲೀಸ್ ಸಿಬ್ಬಂದಿಗಳನ್ನು ಮತ್ತಷ್ಟು ಹೆಚ್ಚಿಸಬೇಕು.ಇನ್ನೂ ಮುಂದೆ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಕರ್ತವ್ಯ ನಿರ್ವಹಿಸಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಿ,ಶೀಘ್ರದಲ್ಲಿ ದರೋಡೆಕೊರರನ್ನು ಪತ್ತೆ ಹಚ್ಚುವಂತೆ ಸೂಚನೆ ನೀಡಲಾಯಿತು.
ಸಭೆಯಲ್ಲಿ ಸಿಪಿಐ ಶ್ರೀ ಬಿ.ಎಸ್. ತಳವಾರ,ನಗರ ಪೊಲೀಸ್ ಠಾಣೆಯ ಪಿಎಸ್ಐ ಶ್ರೀ ಶಿವಾನಂದ ಕಾರಜೋಳ,ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್ಐ ಶ್ರೀ ಶಿವರಾಜ್ ನಾಯಿಕವಾಡಿ, ಬಸವೇಶ್ವರ ಚೌಕ್ ಪೊಲೀಸ್ ಠಾಣೆಯ ಪಿಎಸ್ಐ ಶ್ರೀ ರಮೇಶ ಪೊವಾರ,ಶ್ರೀ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆಯ ನಿರ್ದೇಶಕರಾದ ಶ್ರೀ ಜಯವಂತ ಭಾಟಲೆ,ಶ್ರೀ ರಾಜು ಗುಂದೇಶಾ,ಶ್ರೀ ಮಹಾಲಿಂಗ ಕೋಠಿವಾಲೆ, ಶ್ರೀ ಸುನಿಲ ಪಾಟೀಲ,ಯುವ ಮೋರ್ಚಾ ಸದಸ್ಯರು ಉಪಸ್ಥಿತರಿದ್ದರು.
Laxmi News 24×7