ಬೆಳಗಾವಿ: ಈ ಸದನದಲ್ಲಿ ನಿಜವಾದ ಪ್ರತಿಪಕ್ಷದ ನಾಯಕ ಅಂದರೆ ನಾನೇ. ನಾನು ಅಡ್ಜಸ್ಟ್ಮೆಂಟ್ ರಾಜಕಾರಣಿ ಅಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿ ನಾಯಕರ ಕಾಲೆಳೆದರು.
ಸದನ ಆರಂಭವಾಗುತ್ತಿದ್ದಂತೆ ಪ್ರಶ್ನೋತ್ತರ ಕಲಾಪಕ್ಕೆ ಸ್ಪೀಕರ್ ಯು. ಟಿ. ಖಾದರ್ ಅವಕಾಶ ಕೊಟ್ಟರು. ಇದಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಆಕ್ಷೇಪಿಸಿ, ಎಲ್ಲವನ್ನೂ ಬದಿಗೊತ್ತಿ ಉತ್ತರ ಕರ್ನಾಟಕ ಭಾಗದ ಚರ್ಚೆ ಮಾಡುತ್ತೇವೆ ಅಂತಾ ಸಚಿವರೇ ಹೇಳಿದ್ದಾರೆ. ಹೀಗಾಗಿ, ಉತ್ತರ ಕರ್ನಾಟಕ ಭಾಗದ ಬಗ್ಗೆ ಮೊದಲೇ ಚರ್ಚೆ ಮಾಡಬೇಕೆಂದು ಪಟ್ಟು ಹಿಡಿದರು. ಆಗ ಪ್ರಶ್ನೋತ್ತರ ಕಲಾಪಕ್ಕೆ ಆಡಳಿತ ಪಕ್ಷದ ಶಾಸಕ ರಂಗನಾಥ್ ಒತ್ತಾಯ ಮಾಡಿದರು. ಇದೇ ವೇಳೆ, ಮಧ್ಯಪ್ರವೇಶಿಸಿದ ಬಸನಗೌಡ ಯತ್ನಾಳ್ ಉ.ಕ. ಚರ್ಚೆ ಬಗ್ಗೆ ಅವಕಾಶ ನೀಡಿರುವುದು ಸ್ವಾಗತಾರ್ಹ. ಆದರೆ, ನಿಯಮದಂತೆ ಪ್ರಶ್ನೋತ್ತರ ಅವಧಿಗೆ ಅವಕಾಶ ನೀಡಿ ಬಳಿಕ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸೋಣ ಎಂದು ಮನವಿ ಮಾಡಿದರು.
Laxmi News 24×7