Breaking News

ಬೈಲಹೊಂಗಲ ತಾಲೂಕುವನ್ನು ಜಿಲ್ಲೆಯಾಗಿ ಮಾಡಬೆಕೆಂದು ಎಲ್ಲರ ಪರವಾಗಿ ವಿನಂತಿ

Spread the love

ಬೈಲಹೊಂಗಲ ಜಿಲ್ಲಾ ಹೋರಾಟ ಸಮಿತಿಯ ಸರ್ವ ಸದಸ್ಯರು ಹಾಗೂ ಪರಮ ಪೂಜ್ಯರುಗಳ ನಿಯೋಗದೊಂದಿಗೆ ಇಂದು ಬೆಳಗಾವಿಯ ಸುವರ್ಣಸೌಧದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಡಿ ಕೆ ಶಿವಕುಮಾರ್ ಅವರಿಗೆ ಬೆಳಗಾವಿ ಜಿಲ್ಲೆ ಅಖಂಡವಾಗಿ ಉಳಿಯಬೇಕು ಒಂದು ವೇಳೆ ವಿಭಜನೆಯಾದರೆ ಉಪ ವಿಭಾಗವಾಗಿರುವ ಬೈಲಹೊಂಗಲ ತಾಲೂಕುವನ್ನು ಜಿಲ್ಲೆಯಾಗಿ ಮಾಡಬೆಕೆಂದು ಎಲ್ಲರ ಪರವಾಗಿ ವಿನಂತಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್, ಸರ್ಕಾರದ ಮುಖ್ಯ ಸಚೇತಕರು ಶ್ರೀ ಅಶೋಕ್ ಪಟ್ಟಣ, ಕಿತ್ತೂರು ಮತ ಕ್ಷೇತ್ರದ ಶಾಸಕರಾದ ಶ್ರೀ ಬಾಬಾಸಾಹೇಬ ಪಾಟೀಲ, ಮಾಜಿ ಶಾಸಕರುಗಳು, ಎಲ್ಲ ಚುನಾಯಿತ ಪ್ರತಿನಿಧಿಗಳು, ಹೋರಾಟ ಸಮಿತಿಯ ಎಲ್ಲ ಪದಾಧಿಕಾರಿಗಳು, ಗುರು ಹಿರಿಯರು ಉಪಸ್ಥಿತರಿದ್ದರು. 


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ