ಹಾಸ್ಟೆಲ್ ನಿಂದ ಕಾಣೆಯಾಗಿದ್ದ ವಿದ್ಯಾರ್ಥಿಗಳು ವಿಜಯಪುರದಲ್ಲಿ ಪತ್ತೆ..!!!
ಮೂರಾರ್ಜಿ ವಸತಿ ಶಾಲೆಯ 10ನೇ ತರಗತಿಯ ನಾಲ್ಕು ವಿದ್ಯಾರ್ಥಿಗಳು..
ಬಾಗಲಕೋಟೆ ನಗರದ ಮೂರಾರ್ಜಿ ಬಾಲಕಿಯರ ವಸತಿ ಶಾಲೆ..
ಹಾಸ್ಟೆಲ್ ವಾರ್ಡನ್ ಹಾಗೂ ಸಿಬ್ಬಂದಿ ನಿರ್ಲಕ್ಷ್ಯ..
ಬಾಗಲಕೋಟೆ ನಗರದ ಮೂರಾರ್ಜಿ ಬಾಲಕಿಯರ ವಸತಿ ಶಾಲೆಯ 10ನೇ ತರಗತಿಯ ನಾಲ್ವರು ವಿದ್ಯಾರ್ಥಿನಿಯರು ಏಕಾಏಕಿ ನಾಪತ್ತೆಯಾಗಿದ್ದು, ಬಾಗಲಕೋಟೆಯಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಆದರೆ, ನಾಪತ್ತೆಯಾಗಿದ್ದ ವಿದ್ಯಾರ್ಥಿನಿಯರು ಇಂದು ನಸುಕಿನ ಜಾವ ವಿಜಯಪುರ ಬಸ್ ನಿಲ್ದಾಣದಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನಿನ್ನೆ ಸಂಜೆ ಸುಮಾರು 6 ಗಂಟೆ ಸುಮಾರಿಗೆ ಹಾಸ್ಟೆಲ್‌ನಲ್ಲಿದ್ದ ನಾಲ್ವರು ವಿದ್ಯಾರ್ಥಿನಿಯರು ಏಕಾಏಕಿ ನಾಪತ್ತೆಯಾಗಿದ್ದರು. ವಸತಿ ಶಾಲೆಯ ಕಾಂಪೌಂಡ್ ಹಾರಿ ವಿದ್ಯಾರ್ಥಿನಿಯರು ಹೊರ ಹೋಗಿದ್ದರು ಎನ್ನಲಾಗಿದೆ.
ವಸತಿ ಶಾಲೆಯ ಪ್ರಿನ್ಸಿಪಾಲ್, ವಾರ್ಡನ್ ಹಾಗೂ ಸಿಬ್ಬಂದಿಯ ಬೇಜವಾಬ್ದಾರಿ ಮತ್ತು ನಿರ್ಲಕ್ಷ್ಯವೇ ವಿದ್ಯಾರ್ಥಿನಿಯರು ಪರಾರಿಯಾಗಲು ಕಾರಣ ಎಂದು ದೂರಲಾಗಿದೆ. ವಿದ್ಯಾರ್ಥಿನಿಯರು ನಾಪತ್ತೆಯಾದ ನಾಲ್ಕೈದು ಗಂಟೆಗಳ ಬಳಿಕವಷ್ಟೇ ಹಾಸ್ಟೆಲ್ ಸಿಬ್ಬಂದಿ ಎಚ್ಚೆತ್ತುಕೊಂಡಿದ್ದಾರೆ.ಸಿಬ್ಬಂದಿ ತಡರಾತ್ರಿ ಬಾಗಲಕೋಟೆಯ ಮಹಿಳಾ ಪೊಲೀಸ್ ಠಾಣೆಯಲ್ಲಿ ನಾಪತ್ತೆಯ ಕುರಿತು ದೂರು ದಾಖಲಿಸಿದ್ದರು.
ದೂರಿನ ಆಧಾರದ ಮೇಲೆ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು, ವಿದ್ಯಾರ್ಥಿನಿಯರ ಮೊಬೈಲ್ ಲೊಕೇಷನ್ ಪತ್ತೆ ಹಚ್ಚುವಲ್ಲಿ ಯಶಸ್ವಿಯಾದರು.
ಪೊಲೀಸರ ತೀವ್ರ ಕಾರ್ಯಾಚರಣೆಯ ಫಲವಾಗಿ, ನಾಪತ್ತೆಯಾಗಿದ್ದ ವಿದ್ಯಾರ್ಥಿನಿಯರು ಇಂದು ನಸುಕಿನ ಜಾವ ಸುಮಾರು 4 ಗಂಟೆಗೆ ವಿಜಯಪುರ ಬಸ್ ನಿಲ್ದಾಣದಲ್ಲಿ ಪತ್ತೆಯಾಗಿದ್ದಾರೆ. ವಿದ್ಯಾರ್ಥಿನಿಯರು ನಾಪತ್ತೆಗೆ ಕಾರಣಗಳೇನು ಮತ್ತು ಅವರು ವಿಜಯಪುರಕ್ಕೆ ತೆರಳಿದ್ದು ಏಕೆ ಎಂಬ ಕುರಿತು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಜೊತೆಗೆ, ವಸತಿ ಶಾಲೆಯ ಸಿಬ್ಬಂದಿ ಮತ್ತು ವಾರ್ಡನ್‌ರ ನಿರ್ಲಕ್ಷ್ಯದ ಕುರಿತು ಸಹ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.
Laxmi News 24×7