Breaking News
Home / Uncategorized / ರೈತ-ಕಾರ್ಮಿಕ ವಿರೋಧಿ ಹೊಸ ಕಾಯ್ದೆಗಳ ಪ್ರತಿಗಳನ್ನ ದಹಿಸಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ

ರೈತ-ಕಾರ್ಮಿಕ ವಿರೋಧಿ ಹೊಸ ಕಾಯ್ದೆಗಳ ಪ್ರತಿಗಳನ್ನ ದಹಿಸಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ

Spread the love

ಹುಬ್ಬಳ್ಳಿ: ಕೇಂದ್ರ ಸರ್ಕಾರ ರೈತ ಮತ್ತು ಕಾರ್ಮಿಕ ವಿರೋಧಿ ಕಾನೂನು ಜಾರಿಗೆ ತಂದಿದೆ‌ ಎಂದು ಆರೋಪಿಸಿ ಹುಬ್ಬಳ್ಳಿಯ ಅಮರಗೋಳ ಎಪಿಎಂಎಸಿಯಲ್ಲಿ ಹಮಾಲಿ ಕಾರ್ಮಿಕರು ಪ್ರತಿಭಟನೆ ಮಾಡಿದರು.‌ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ನೂತನ ಕೃಷಿ, ಎಪಿಎಮ್‌ಸಿ, ವಿದ್ಯುತ್ ಕಾಯ್ದೆಗಳು ರೈತರು ಮತ್ತು ಕಾರ್ಮಿಕರ ಹಿತಾಸಕ್ತಿಗೆ ವಿರೋಧಿಯಾಗಿವೆ. ಸರ್ಕಾರ ಅನ್ನದಾತರ ಹೋರಾಟಕ್ಕೆ ಸ್ಪಂದಿಸಬೇಕು‌. ಅನ್ನದಾತರು ಮತ್ತು ಕೂಲಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದ್ರು.

ಎಪಿಎಂಸಿ ಹಮಾಲಿ ಕಾರ್ಮಿಕರ ಒಕ್ಕೂಟದ ಸದಸ್ಯರು ಸಿಐಟಿಯು ನೇತೃತ್ವದಲ್ಲಿ ಶುಕ್ರವಾರ ರೈತ ಕಾರ್ಮಿಕ ವಿರೋಧಿ ಹೊಸ ಕಾನೂನುಗಳ ಪ್ರತಿಗಳನ್ನು ಧಹಿಸಿ ಪ್ರತಿಭಟನೆ ನಡೆಸಿ ಕೇಂದ್ರ ಸರಕಾರ ಕೂಡಲೇ ಈ ಜನವಿರೋಧಿ ಕಾನೂನುಗಳನ್ನು ವಾಪಸ್ ಪಡೆಯಲು ಆಗ್ರಹಿಸಿದರು. ನಂತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಪಿಎಂಸಿ ಕಾರ್ಯದರ್ಶಿ ಮುಖಾಂತರ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಿದರು.ರೈತ ವಿರೋಧಿ ಕೃಷಿ ಕಾಯಿದೆಗಳನ್ನು ಹಾಗು ಜನ ವಿರೋಧಿ ವಿದ್ಯುತ್ ಮಸೂದೆಯನ್ನು ಹಿಂಪಡೆಯಲು ಒತ್ತಾಯಿಸಿ ದೇಶದ ರೈತ ಸಮೂಹವು ದೆಹಲಿ ಸೇರಿದಂತೆ ದೇಶದಾದ್ಯಂತ ನಡೆಸುತ್ತಿರುವ ಹೋರಾಟ ತೀವ್ರವಾಗುತ್ತಿದೆ. ಇದೇ ಸಂದರ್ಭದಲ್ಲಿ ಬಂಡವಾಳಗಾರರ ಪರವಾಗಿರುವ 4 ಕಾರ್ಮಿಕ ಸಂಹಿತೆಗಳನ್ನು ರದ್ಧುಗೊಳಿಸಲು ಒತ್ತಾಯಿಸಿ ಹಾಗು ಇತರೆ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಸಿಐಟಿಯು ನೇತೃತ್ವದಲ್ಲಿ ಕೆಲಸದ ಸ್ಥಳಗಳಲ್ಲಿ ರಾಷ್ಟ್ರಾದ್ಯಂತ ಪ್ರತಿಭಟನೆಗಳನ್ನು ನಡೆಸಲಾಗುತ್ತಿದೆ.

ರಾಜ್ಯಾದ್ಯಂತ ಸಂಘಟಿತ ಕಾರ್ಮಿಕರು ಪ್ರತಿ ಕಾರ್ಖಾನೆಗಳ ಎದುರು ಹಾಗು ಬಿಸಿಯೂಟ, ಅಂಗನವಾಡಿ, ಗ್ರಾಮ ಪಂಚಾಯತ್, ಹಮಾಲಿ, ಬೀದಿಬದಿ, ಬೀಡಿ, ಕಟ್ಟಡ ಮುಂತಾದ ಅಸಂಘಟಿತ ಕಾರ್ಮಿಕರು ಮತ್ತು ವಿವಿಧ ಗುತ್ತಿಗೆ ಕಾರ್ಮಿಕರು ತಮ್ಮ ಕೆಲಸದ ಸ್ಥಳಗಳಲ್ಲಿ ಕರಾಳ ಕಾನೂನುಗಳಾದ 4 ಕಾರ್ಮಿಕ ಸಂಹಿತೆಗಳು, ಮೂರು ಕೃಷಿ ಕಾನೂನುಗಳು ಹಾಗು ವಿದ್ಯುತ್ ಕಾನೂನುಗಳ ಪ್ರತಿಗಳನ್ನು ಸುಡುವುದರ ಮೂಲಕ ಪ್ರತಿಭಟನೆ ನಡೆಸಿದರು. ರೈತರು ಮತ್ತು ಕೂಲಿ ಕಾರ್ಮಿಕರ ಬೇಡಿಕೆಗೆ ಕೇಂದ್ರ ಸರ್ಕಾರ ಸ್ಪಂದಿಸುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ಕಾರ್ಮಿಕ ಮುಖಂಡರು ಹೇಳಿದರು.


Spread the love

About Laxminews 24x7

Check Also

2 ಮಂದಿ ಜೆಡಿಎಸ್‌ ಶಾಸಕರು ಕಾಂಗ್ರೆಸ್‌ ಸೇರ್ಪಡೆ – ಡಿಕೆಶಿ ಹೇಳಿದ್ದು ಹೀಗೆ!

Spread the loveಬೆಂಗಳೂರು : ಜೆಡಿಎಸ್‌ (JDS) ಶಾಸಕರು ಸಾಮೂಹಿಕವಾಗಿ ಪಕ್ಷ ತೊರೆದು ಕಾಂಗ್ರೆಸ್‌ (Congress) ಸೇರಲಿದ್ದಾರೆ ಎಂಬ ವದಂತಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ