Breaking News

ಏರ್ ಗನ್​ನಿಂದ ಅಚಾನಕ್ಕಾಗಿ ಉದ್ಯಮಿಗೆ ಗುಂಡು ತಗುಲಿದ ಪ್ರಕರಣ: ಕಾನೂನು ವಿದ್ಯಾರ್ಥಿ ಬಂಧನ

Spread the love

ಬೆಂಗಳೂರು: ನಗರದ ಬಸನನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕೃಷ್ಣರಾವ್ ಪಾರ್ಕ್ ನಲ್ಲಿ ಉದ್ಯಮಿ ಮೇಲೆ ಏರ್ ಗನ್ ನಿಂದ ಗುಂಡು ಹಾರಿಸಿದ ಆರೋಪದಡಿ ಕಾನೂನು ವಿದ್ಯಾರ್ಥಿಯನ್ನು ಬಂಧಿಸಲಾಗಿದೆ. ಮೊಹಮ್ಮದ್ ಅಫ್ಜಲ್ ಬಂಧಿತ ವಿದ್ಯಾರ್ಥಿ.

ಡಿ.10 ರಂದು ಸಂಜೆ ಪಾರ್ಕ್ ನಲ್ಲಿ ಉದ್ಯಮಿ ರಾಜಗೋಪಾಲ್ ಎಂಬುವರು ವಾಯು ವಿಹಾರ ಮಾಡುತ್ತಿದ್ದಾಗ ಕುತ್ತಿಗೆ ಹಿಂಭಾಗಕ್ಕೆ ಏರ್ ಗನ್ ನಿಂದ ಹಾರಿದ ಗುಂಡು ತಗುಲಿತ್ತು.‌ ಈ ಸಂಬಂಧ ದೂರು ದಾಖಲಿಸಿಕೊಂಡ ಬಸವನಗುಡಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಪ್ರಕರಣದ ಹಿನ್ನೆಲೆ: ಡಿಸೆಂಬರ್ 10ರ ರಾತ್ರಿ 8:30ರ ಸುಮಾರಿನಲ್ಲಿ ಬಸವನಗುಡಿಯ ಕೃಷ್ಣರಾವ್ ಪಾರ್ಕ್ ಬಳಿ ಈ ಘಟನೆ ನಡೆದಿತ್ತು. ನರ್ತಕಿ ಹಾಗೂ ಕಾರ್ಗಿಲ್ ಬಾರ್ ಮಾಲೀಕ ರಾಜಗೋಪಾಲ್ ಅವರು ನಡೆದುಕೊಂಡು ಹೋಗುತ್ತಿದ್ದಾಗ ಏರ್ ಗನ್ ಗುಂಡು ಅವರ ಕತ್ತಿನ ಭಾಗಕ್ಕೆ ತಗುಲಿ ಗಾಯವಾಗಿತ್ತು. ತಕ್ಷಣವೇ ಅವರನ್ನು ಜಯನಗರದ ಬೆಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಪೊಲೀಸರು ತನಿಖೆ ಕೈಗೊಂಡಾಗ, ಗಾಯಗೊಂಡ ಉದ್ಯಮಿ ರಾಜಗೋಪಾಲ್ ಅವರಿಗೆ ಯಾರ ಮೇಲೂ ಅನುಮಾನವಿರಲಿಲ್ಲ. ತಮಗೆ ಯಾವುದೇ ಬೆದರಿಕೆ ಕರೆಗಳು ಬಂದಿರಲಿಲ್ಲ, ಹಾಗೂ ಫೈರಿಂಗ್ ಯಾಕೆ ನಡೆಯಿತು ಅಥವಾ ಯಾರು ಮಾಡಿದರು ಎಂಬುದು ಸಹ ತಿಳಿದಿಲ್ಲ ಎಂದು ಅವರು ಪೊಲೀಸರಿಗೆ ತಿಳಿಸಿದ್ದರು. ದೂರುದಾರರು ನೀಡಿದ ಮಾಹಿತಿ ಆಧರಿಸಿ ಬಸವನಗುಡಿ ಪೊಲೀಸರು ತನಿಖೆ ಮುಂದುವರಿಸಿದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ