Breaking News

ದೇಶದ ಹಿರಿಯ ರಾಜಕಾರಣಿ, ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ

Spread the love

ಬೆಂಗಳೂರು: ದೇಶದ ಹಿರಿಯ ರಾಜಕಾರಣಿ, ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ (94) ಅವರು ಇಂದು ಸಂಜೆ ನಿಧನರಾದರು. ವಯೋಸಹಜ ಅನಾರೋಗ್ಯ ಹಿನ್ನೆಲೆಯಲ್ಲಿ ಕಳೆದ ಕೆಲ ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಜೂನ್ 16, 1931ರಲ್ಲಿ ದಾವಣಗೆರೆಯ ಶಾಮನೂರು ಗ್ರಾಮದಲ್ಲಿ ಜನಿಸಿದ್ದ ಶಾಮನೂರು ಶಿವಶಂಕರಪ್ಪ ಅವರು 6 ಬಾರಿ ಶಾಸಕರಾಗಿದ್ದರು. ಹಲವು ಮುಖ್ಯಮಂತ್ರಿಗಳ ಸಂಪುಟದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಶಾಮನೂರು ಅವರು ಅಖಿಲ ಭಾರತೀಯ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಮಹಾಸಭಾದಲ್ಲಿ ಅವರ ನೇತೃತ್ವದಲ್ಲಿ ಸಾಕಷ್ಟು ಕಾರ್ಯಕ್ರಮಗಳು ನಡೆದಿವೆ.ಶಾಮನೂರು ಶಿವಶಂಕರಪ್ಪ ಅವರ ಪಾರ್ಥಿವ ಶರೀರವನ್ನು ಅಖಿಲ ಭಾರತ ವೀರಶೈವ ಮಹಾಸಭಾ ಕಚೇರಿಗೆ ಕೊಂಡೊಯ್ಯಲು ಸಿದ್ಧತೆ ನಡೆಸಲಾಗುತ್ತಿದೆ.‌ ಬಳ್ಳಾರಿ ರಸ್ತೆ, ಪ್ಯಾಲೇಸ್ ಗ್ರೌಂಡ್ ಎದುರುಗಡೆ ಇರುವ ಮುಖ್ಯ ಕಚೇರಿಗೆ ಕೊಂಡೊಯ್ಯಲಾಗುತ್ತಿದೆ. ಸ್ಪರ್ಶ ಆಸ್ಪತ್ರೆಯಿಂದ ವೀರಶೈವ ಮಹಾಸಭಾ ಕಚೇರಿಗೆ ಪಾರ್ಥೀವ ಶರೀರ ಶಿಫ್ಟ್ ಮಾಡಲಾಗುವುದು. ಅಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಬೆಳಗ್ಗೆಯೊಳಗೆ ದಾವಣಗೆರೆಗೆ ಪಾರ್ಥಿವ ಶರೀರ ರವಾನಿಸಲಾಗುತ್ತಿದೆ ಎಂಬ ಮಾಹಿತಿ ಅಖಿಲ ಭಾರತ ವೀರಶೈವ ಮಹಾಸಭಾ ಮೂಲಗಳಿಂದ ಲಭ್ಯವಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ