Breaking News

ಎಸ್ಎಸ್ಎಲ್ ಸಿ, ಪಿಯುಸಿ ಪರೀಕ್ಷಾ ಟೆಂಟೆಟಿವ್ ವೇಳಾಪಟ್ಟಿ

Spread the love

ಬೆಂಗಳೂರು – ರಾಜ್ಯದಲ್ಲಿ 2020-2021ನೇ ಸಾಲಿನ ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆ ನಡೆಸಲು ರಾಜ್ಯಸರಕಾರ ಸಿದ್ಧತೆ ಮಾಡುತ್ತಿದೆ. ಮಂಗಳವಾರ ಅಥವಾ ಬುಧವಾರ ಈ ಎರಡೂ ಪರಿಕ್ಷೆಗಳ ಟೆಂಟೆಟಿವ್ ವೇಳಾಪಟ್ಟಿ ಪ್ರಕಟಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ ಕುಮಾರ ಮಾಹಿತಿ ನೀಡಿದ್ದಾರೆ.

 

 

 

 

 

ಮಕ್ಕಳಿಗೆ ಓದುವುದಕ್ಕೆ ಸಾಕಷ್ಟು ಸಮಯಾವಕಾಶ ಇರುವಂತೆ ವೇಳಾಪಟ್ಟಿ ಪ್ರಕಟಿಸಲಾಗುವುದು. ಈಗ ಪ್ರಕಟಿಸಲಾಗುವ ವೇಳಾಪಟ್ಟಿಯೇ ಅಂತಿಮವೂ ಆಗಬಹುದು ಅಥವಾ ಅಲ್ಪಸ್ವಲ್ಪ ಮಾರ್ಪಾಟಾಗಬಹುದು ಎಂದು ಅವರು ಮಾಹಿತಿ ನೀಡಿದ್ದಾರೆ.

ಶುಕ್ರವಾರ ವಿವಿಧ ಶಾಲೆಗಳಿಗೆ ಭೇಟಿ ನೀಡಿದ ಸುರೇಶ ಕುಮಾರ ಶಾಲೆ ನಡೆಸುವುದಕ್ಕೆ ಮಾಡಿಕೊಳ್ಳಲಾಗಿರುವ ಸಿದ್ಧತೆಗಳನ್ನು ಪರಿಶೀಲಿಸಿದರು. ಈ ವೇಳೆ ಅನೇಕ ವಿದ್ಯಾರ್ಥಿಗಳು ಪರೀಕ್ಷೆ ಕುರಿತು ಸಚಿವರನ್ನು ಪ್ರಶ್ನಿಸಿದರು.

ಪರೀಕ್ಷೆ ಕುರಿತು ಯಾರೂ ಆತಂಕ ಪಡಬೇಕಾಗಿಲ್ಲ. ಓದುವುದಕ್ಕೆ ಸಾಕಷ್ಟು ಸಮಯಾವಕಾಶ ಇರುವಂತೆ ವೇಳಾಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಅವರು ಭರವಸೆ ನೀಡಿದರು.

 


Spread the love

About Laxminews 24x7

Check Also

12 ಸಾವಿರ ಉದ್ಯೋಗಿಗಳ ಕಡಿತ; ಟಿಸಿಎಸ್​​ಗೆ ರಾಜ್ಯ ಕಾರ್ಮಿಕ ಇಲಾಖೆಯಿಂದ ಸಮನ್ಸ್

Spread the loveಬೆಂಗಳೂರು: ಹನ್ನೆರಡು ಸಾವಿರದಷ್ಟು ಬೃಹತ್ ಸಂಖ್ಯೆಯ ಉದ್ಯೋಗಿಗಳನ್ನು ಕೆಲಸದಿಂದ ತಗೆದುಹಾಕುವುದಕ್ಕೆ ಸಂಬಂಧಪಟ್ಟಂತೆ ವಿವರಣೆ ಕೇಳಿ ರಾಜ್ಯ ಕಾರ್ಮಿಕ ಇಲಾಖೆಯು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ