Breaking News
Home / Uncategorized / ಬೆಳಗಾವಿಯಲ್ಲಿ ನಾಡದ್ರೋಹಿಗಳ ವಿರುದ್ಧ ಕಠಿಣ ಕ್ರಮಕ್ಕೆ ಎಚ್ಡಿಕೆ ಆಗ್ರಹ January 2, 2021 belagavi Kan

ಬೆಳಗಾವಿಯಲ್ಲಿ ನಾಡದ್ರೋಹಿಗಳ ವಿರುದ್ಧ ಕಠಿಣ ಕ್ರಮಕ್ಕೆ ಎಚ್ಡಿಕೆ ಆಗ್ರಹ January 2, 2021 belagavi Kan

Spread the love

ಬೆಂಗಳೂರು, ಜ.2- ಬೆಳಗಾವಿ ಮಹಾನಗರ ಪಾಲಿಕೆ ಮುಂದೆ ಕನ್ನಡ ಧ್ವಜ ಹಾರಿಸಲು ಕಷ್ಟ ಪಡಬೇಕಾದ ಪರಿಸ್ಥಿತಿಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತ ಪಡಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ಸರ್ಕಾರ ಕೂಡಲೇ ಕಠಿಣ ಕ್ರಮ ಕೈಗೊಳ್ಳದಿದ್ದರೆ ಮುಂದೆ ಕೈಲಾಗದವರೆಲ್ಲಾ ಕನ್ನಡಿಗರ ಮೇಲೆ ಸವಾರಿ ಮಾಡಲು ಬರಬಹುದು ಎಂದು ಎಚ್ಚರಿಸಿದ್ದಾರೆ.

ಬೆಳಗಾವಿ ಪಾಲಿಕೆ ಎದುರು ಡಿ.28ರಂದು ಕನ್ನಡಪರ ಹೋರಾಟಗಾರರು ನಾಡ ಧ್ವಜ ಹಾರಿಸಿದ ನಂತರದ ಘಟನೆಗಳನ್ನು ಸೂಕ್ಷ್ಮವಾಗಿ ಗಮನಿಸಿದ್ದೇನೆ. ನಮ್ಮ ನೆಲದಲ್ಲಿ ನಮ್ಮ ಧ್ವಜ ಹಾರಿಸಲು ಹರಸಾಹಸಪಡುವುದು, ಅದಕ್ಕೆ ಕಾವಲು ಕಾಯುವುದು, ಧ್ವಜ ತೆರವು ಮಾಡದಂತೆ ಅಧಿಕಾರಿಗಳಲ್ಲಿ ಮನವಿ ಮಾಡುವುದು ಇವೆಲ್ಲವೂ ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆಯುಂಟು ಮಾಡುತ್ತಿವೆ.

ಪಾಲಿಕೆ ಎದುರು ಧ್ಜಜ ಸ್ಥಾಪಿಸಿದ ಕನ್ನಡ ಹೋರಾಟಗಾರ ಶ್ರೀನಿವಾಸ ತಾಳಕೂರ ಎಂಬುವವರ ಅಂಗಡಿಗೆ ಕಿಡಿಗೇಡಿಗಳು ಬೆಂಕಿ ಇಡಲು ಯತ್ನಿಸಿರುವ ಘಟನೆಯೂ ನಡೆದಿದೆ. ಕರ್ನಾಟಕದಲ್ಲಿ ಕನ್ನಡ ಧ್ವಜಕ್ಕಾಗಿ ಹೋರಾಡಿದವರ ಮೇಲೆ ಪದೇ ಪದೇ ದಾಳಿ ನಡೆಯುತ್ತದೆ ಎಂದರೆ, ಅವರಿಗೆ ರಕ್ಷಣೆ ನೀಡಲಾಗುತ್ತಿಲ್ಲ ಎಂದರೆ ಆಳುವವರ ಕನ್ನಡಾಭಿಮಾನ, ನಾಡಪ್ರೇಮ ಪ್ರಶ್ನಾರ್ಹ ಎಂದಿದ್ದಾರೆ.

ಕನ್ನಡಿಗರ ಭಾವೈಕ್ಯದ ಸಂಕೇತವಾಗಿರುವ ಕನ್ನಡ ಧ್ವಜ ಡಿ.31ರ ಒಳಗಾಗಿ ತೆರವು ಗೊಳಿಸಬೇಕು ಎಂದು ಹೇಳಿದಾಗಲೇ ಮಹಾರಾಷ್ಟ್ರ ಏಕೀಕರಣ ಸಮಿತಿಯ ವಿರುದ್ಧ ಕ್ರಮ ಕೈಗೊಳ್ಳಬೇಕಿತ್ತು. ಈಗ ಕನ್ನಡ ಹೋರಾಟಗಾರರ ಮೇಲೆ ದಾಳಿಯ ಪ್ರಯತ್ನಗಳು ನಡೆಯುತ್ತಿವೆ. ಕರ್ನಾಟಕದಲ್ಲಿ ಕನ್ನಡಿಗರಿಗೇ ಎಚ್ಚರಿಕೆ ನೀಡುವ ಧೈರ್ಯ ತೋರುವವರಿಗೆ ಶಾಸ್ತಿಯಾಗಬೇಕು ಎಂದು ಒತ್ತಾಯಿಸಿದ್ದಾರೆ.ಬೆಳಗಾವಿಯಲ್ಲಿ ಕನ್ನಡ ಧ್ವಜ ಸ್ಥಾಪಿಸಿದ ನಂತರದ ಘಟನೆಗಳನ್ನು ಸರ್ಕಾರ ಕೂಡಲೇ ಪರಿಶೀಲಿಸಬೇಕು. ಇದರಲ್ಲಿ ಉದ್ಧಟತನ ತೋರುತ್ತಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಆ ಮೂಲಕ ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ ಎಂಬ ಸಂದೇಶ ರವಾನಿಸಬೇಕು. ಇಲ್ಲವಾದರೆ, ಕೈಲಾಗದವರೆಲ್ಲರೂ ಕನ್ನಡಿಗರ ಮೇಲೆ ಸವಾರಿ ಮಾಡಲು ಬಂದಾರು ಎಂದು ಎಚ್ಚರಿಸಿದ್ದಾರೆ.


Spread the love

About Laxminews 24x7

Check Also

ಮತದಾನ ಮೊದಲು ನಂತರ ಮದುವೆ: ಓಡಿ ಬಂದು ಮತ ಹಾಕಿದ ವರ-ವಧು

Spread the love ಚಾಮರಾಜನಗರ ಏಪ್ರಿಲ್ 26: ದಾಂಪತ್ಯ ಜೀವನಕ್ಕೆ ಕಾಲಿಡುವ ಮುನ್ನ ವರನೊಬ್ಬ ಓಡಿ ಬಂದು ಮತ ಚಲಾಯಿಸಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ