Breaking News

ಚಿಕ್ಕೋಡಿ ಜಿಲ್ಲೆ ರಚನೆಗೆ ಬಹಳ ದಿನ ಹಿಡಿಯಲ್ಲ: ಸಚಿವ ಹೆಚ್​.ಕೆ.ಪಾಟೀಲ್​

Spread the love

ಚಿಕ್ಕೋಡಿ: “ಚಿಕ್ಕೋಡಿ ಜಿಲ್ಲಾ ರಚನೆಗೆ ಈಗಾಗಲೇ ಮುಖ್ಯಮಂತ್ರಿಗಳು ಜಿಲ್ಲಾ ಉಸ್ತುವಾರಿಗಳೊಂದಿಗೆ ಸಭೆ ಮಾಡಿದ್ದಾರೆ. ಮುಂದಿನ ಹೆಜ್ಜೆಗಳನ್ನಿಡಲು ಬೇಗ ಪ್ರಕ್ರಿಯೆ ಆರಂಭವಾಗಬಹುದು” ಎಂದು ಕಾನೂನು ಮತ್ತು ಸಂಸದೀಯ ಸಚಿವ ಹೆಚ್​.ಕೆ.ಪಾಟೀಲ್​ ಹೇಳಿದರು.

ಚಿಕ್ಕೋಡಿ ನ್ಯಾಯಾಲಯದ ನೂತನ ಕಟ್ಟಡ ಸಂಕೀರ್ಣ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, “ಈ ಕುರಿತಾಗಿ ಸಿಎಂ ಸಿದ್ದರಾಮಯ್ಯನವರು ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಸಭೆ ಮಾಡಿದ್ದಾರೆ. ಸಚಿವರೂ ಕೂಡ ಚಿಕ್ಕೋಡಿ, ಬೆಳಗಾವಿ, ಗೋಕಾಕ್ ಜನರೊಂದಿಗೆ ಸಭೆ ನಡೆಸಿದ್ದಾರೆ” ಎಂದರು.

ಮಹಾರಾಷ್ಟ್ರ ಸಂಸದ ಧೈರ್ಯಶೀಲ ಮಾನೆ ಅವರು ಬೆಳಗಾವಿ ಡಿಸಿ ವಿರುದ್ಧ ಲೋಕಸಭಾ ಸ್ಪೀಕರ್​ಗೆ ದೂರು ನೀಡಿರುವ ವಿಚಾರಕ್ಕೆ, “ಎಲ್ಲೂ ಇಲ್ಲದ ಗೊಂದಲವನ್ನು ಸೃಷ್ಟಿ ಮಾಡಲು ಏಕೆ ಹೊರಟಿದ್ದೀರಿ?. ಕನ್ನಡಿಗರು ಮರಾಠಿಗರು ಸಹೋದರರಂತೆ ಸಹಬಾಳ್ವೆಯಿಂದ ಇದ್ದೇವೆ. ಯಾಕೆ ಗೊಂದಲ ಸೃಷ್ಟಿ ಮಾಡುತ್ತಿದ್ದೀರಿ?. ರಾಜಕೀಯ ಉದ್ದೇಶದಿಂದ ಗೊಂದಲ ಸೃಷ್ಟಿ ಮಾಡೋದು ಸೂಕ್ತವಲ್ಲ” ಎಂದು ಹೇಳಿದರು.800 ವರ್ಷಗಳ ಇತಿಹಾಸ ಇರುವ ಚಿಕ್ಕೋಡಿ ನ್ಯಾಯಾಲಯದ ಹೊಸ ಕಟ್ಟಡ ಉದ್ಘಾಟನೆ ಬಹಳ ಸಂತೋಷ ತಂದಿದೆ. ಈ ನ್ಯಾಯಾಲಯಕ್ಕೆ ಅಂಬೇಡ್ಕರ್ ಕೂಡ ಬಂದಿದ್ದರು. ಅವರು ನ್ಯಾಯಕ್ಕಾಗಿ ಹೋರಾಟ ಮಾಡಿರುವ ಇತಿಹಾಸ ಕೇಳಿದ್ದೇವೆ. ಈ ನ್ಯಾಯಾಲಯದ ಬಾರ್ ರಾಜ್ಯಕ್ಕೆ ಬಹು ದೊಡ್ಡ ಕೊಡುಗೆ ಕೊಟ್ಟಿದೆ. ವಿಧಾನಸಭೆ ಸ್ಪೀಕರ್ ಕಟಾವಳಿ ಹೆಸರು ನೆನಪಿಗೆ ಬರುತ್ತದೆ” ಎಂದರು.


Spread the love

About Laxminews 24x7

Check Also

ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

Spread the loveಹೊಸದಿಲ್ಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರಾಗಿದ್ದು, ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ