Breaking News

ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 2,443 ಹುದ್ದೆಗಳ ಭರ್ತಿಗೆ ಆನ್‍ಲೈನ್ ಮೂಲಕ ಅರ್ಜಿ

Spread the love

ಹಾವೇರಿ : ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 2,443 ಹುದ್ದೆಗಳ ಭರ್ತಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು 18 ರಿಂದ 40 ವರ್ಷದೊಳಗಿರಬೇಕು ಹಾಗೂ ಎಸ್.ಎಸ್.ಎಲ್.ಸಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು. ಅನುಸೂಚಿತ ಜಾತಿ, ಬುಡಕಟ್ಟು, ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಹಿಂದುಳಿದ ವರ್ಗಗಳು ಮತ್ತು ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ.100 ಅರ್ಜಿ ಶುಲ್ಕವನ್ನು ರಾಜ್ಯದ ಯಾವುದೇ ಮುಖ್ಯ ಅಂಚೆ ಕಛೇರಿಯಲ್ಲಿ ಅಥವಾ ಆಯ್ದ ಅಂಚೆ ಕಛೇರಿಯಲ್ಲಿ ಭರಿಸಬಹುದು.

ಮಹಿಳಾ ಅಭ್ಯರ್ಥಿಗಳಿಗೆ, ತೃತೀಯ ಲಿಂಗಿಗಳಿಗೆ, ಅನುಸೂಚಿತ ಜಾತಿ/ಬುಡಕಟ್ಟು ಅಭ್ಯರ್ಥಿಗಳು ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಅಭ್ಯರ್ಥಿಗಳು 20-01-2021ರೊಳಗೆ http://appost.in/gdsonline ನಲ್ಲಿ ಅರ್ಜಿ ಸಲ್ಲಿಸಿಸಬೇಕು. ಹೆಚ್ಚಿನ ಮಾಹಿತಿಗಾಗಿ http://appost.in/gdsonline ಸಂಪರ್ಕಿಸಬಹುದು.

ಸಹಾಯಕ್ಕಾಗಿ ಬೆಂಗಳೂರು ಮುಖ್ಯ ಕಾರ್ಯಾಲಯ ಪೋಸ್ಟ್ ಮಾಸ್ಟರ್ ಜನರಲ್ ದೂ.080-2239599, ದಕ್ಷಿಣ ಕರ್ನಾಟಕ ವಲಯ ಪೋಸ್ಟ್ ಮಾಸ್ಟರ್ ಜನರಲ್ ಮೊ.94814 55606, ಉತ್ತರ ಕರ್ನಾಟಕ ವಲಯ ಪೋಸ್ಟ್ ಮಾಸ್ಟರ್ ಜನರಲ್ ದೂ.0836-2740454 ಹಾಗೂ ಕರ್ನಾಟಕ ವೃತ್ತ ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್ ದೂ.080-22392544 ಸಂಪರ್ಕಿಸಲು ಕೋರಲಾಗಿದೆ.


Spread the love

About Laxminews 24x7

Check Also

ಸರ್ಕಾರಿ ನೌಕರನಿಗೆ ಲಂಚ ನೀಡಲು ಪತ್ನಿಯ ಮಾಂಗಲ್ಯ ಸರ ಅಡವಿಟ್ಟ ವ್ಯಕ್ತಿ

Spread the loveಹಾವೇರಿ, ಜೂನ್​ 26: ಸರ್ಕಾರಿ ನೌಕರನಿಗೆ ಲಂಚ (bribe) ನೀಡಲು ಸಂತ್ರಸ್ತ ವ್ಯಕ್ತಿ ತಮ್ಮ ಪತ್ನಿಯ ಮಾಂಗಲ್ಯ  ಸರವನ್ನು (Mangalsutra) ಅಡವಿಟ್ಟ ಘಟನೆಯೊಂದು ಹಾವೇರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ