Breaking News

ಹಾಲಿ ಶಿಕ್ಷಕರೂ TET ಬರೆಯಬೇಕೆಂಬ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ: ಮಧು ಬಂಗಾರಪ್ಪ

Spread the love

ಶಿವಮೊಗ್ಗ: “ಶಿಕ್ಷಣದಲ್ಲಿ ಗುಣಾತ್ಮಕ ಬದಲಾವಣೆ ತರಲು ನಿವೃತ್ತಿ ಅಂಚಿನಲ್ಲಿರುವವರನ್ನು ಹೊರತುಪಡಿಸಿ, ಉಳಿದೆಲ್ಲ ಶಿಕ್ಷಕರು ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಬರೆಯಬೇಕೆಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ಈ ಸಂಬಂಧ ನಮ್ಮ ಸರ್ಕಾರದಿಂದ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಲಾಗಿದೆ” ಎಂದು ಶಿಕ್ಷಣ ಸಚಿವ ಎಸ್​.ಮಧು ಬಂಗಾರಪ್ಪ ತಿಳಿಸಿದ್ದಾರೆ.

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಕೋರ್ಟ್ ಆದೇಶ ಮಾಡಿರುವುದು ಸರಿ ಇದೆ. ಈಗ ಇರುವ ಶಿಕ್ಷಕರು 20ರಿಂದ 30 ವರ್ಷಗಳ ಹಿಂದೆ ನೇಮಕಗೊಂಡವರು. ಅವರು ಇಂದಿನ ಕಾಲಕ್ಕೆ ತಕ್ಕಂತೆ ಬದಲಾವಣೆ ಆಗಬೇಕು. ಈಗ ರಾಜ್ಯ ಸರ್ಕಾರ ಮುಂದಿನ 25 ವರ್ಷವನ್ನು ಗಮನದಲ್ಲಿಟ್ಟುಕೊಂಡು ಶಿಕ್ಷಕರನ್ನು ನೇಮಿಸಿಕೊಳ್ಳುತ್ತದೆ. ಸುಪ್ರೀಂ ಕೋರ್ಟ್ ಮಕ್ಕಳು ದಡ್ಡರಾಗುತ್ತಿದ್ದಾರೆಂದು ಎಂದು ತಿಳಿದು ಟಿಇಟಿ ಬರೆಯಲು ಹೇಳಿರಬೇಕು” ಎಂದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ