Breaking News

ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ​ ತೀರ್ಮಾನಕ್ಕೆ ನಾನು ಬದ್ಧ: ಸಿಎಂ

Spread the love

ಮೈಸೂರು: “ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ ಮತ್ತು ಹೈಕಮಾಂಡ್​ ತೀರ್ಮಾನ ಮಾಡಬೇಕು. ಅವರು ಏನು ತೀರ್ಮಾನ ಮಾಡುತ್ತಾರೋ ಅದಕ್ಕೆ ಬದ್ಧ” ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಯಕತ್ವ ಗೊಂದಲವನ್ನು ಸ್ಥಳೀಯ ಮಟ್ಟದಲ್ಲೇ ಬಗೆಹರಿಸಿಕೊಳ್ಳಬೇಕೆಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, “ನಾನು ಹೈಕಮಾಂಡ್​ ಜೊತೆ ಮಾತನಾಡಿದ್ದೇನೆ, ಅವರು ಈ ಬಗ್ಗೆ ನಾವು ತೀರ್ಮಾನ ಮಾಡುತ್ತೇವೆ ಎಂದು ಹೇಳಿದ್ದಾರೆ. ಅವರ ತೀರ್ಮಾನಕ್ಕೆ ನಾನು ಬದ್ಧ” ಎಂದು ಪುನರುಚ್ಚರಿಸಿದರು.

ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್​ ತೀರ್ಮಾನಿಸುತ್ತದೆ ಎಂದು ಸ್ಪಷ್ಟಪಡಿಸಿದ್ದರೂ ಯಾಕೆ ಈ ವಿಚಾರ ಚರ್ಚೆಯಾಗುತ್ತಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ, “ನೀವು(ಮಾಧ್ಯಮದವರು) ಚರ್ಚೆ ಮಾಡುತ್ತಿದ್ದೀರಿ. ಇಷ್ಟೊಂದು ಪ್ರಶ್ನೆ ಕೇಳಬೇಕಾದ ಅಗತ್ಯವೇನಿದೆ?. ನಾನು ಸದನದಲ್ಲಿ ಸ್ಪಷ್ಟನೆ ನೀಡಿದ್ದೇನೆ, ಆದರೂ ಮತ್ತೇಕೆ ಚರ್ಚೆ?” ಎಂದು ಹರಿಹಾಯ್ದರು.

ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ, “ಅದು ಒಪ್ಪಬೇಕಾದ ವಿಚಾರ. ಯಾರೂ ಪಕ್ಷಕ್ಕಿಂತ ದೊಡ್ಡವರಾಗಲು ಸಾಧ್ಯವೇ ಇಲ್ಲ. ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್ ಗಾಂಧಿಯವರು ತೀರ್ಮಾನಿಸಬೇಕು. ಅವರ ತೀರ್ಮಾನಕ್ಕೆ ನಾವು ಬದ್ಧ. ನಾನು ನಾಯಕತ್ವ ಬದಲಾವಣೆ ವಿಚಾರದ ಬಗ್ಗೆ ಪಕ್ಷದ ವರಿಷ್ಠರ ಬಳಿ ಮಾತನಾಡಿದ್ದು, ಈ ಬಗ್ಗೆ ನಾವು ತೀರ್ಮಾನಿಸುತ್ತೇವೆ ಎಂದು ಹೇಳಿದ್ದಾರೆ” ಎಂದರು.

ಮಾಜಿ ಸಚಿವ ಕೆ.ಎನ್.ರಾಜಣ್ಣ ನಿನ್ನೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾದ ಬಗ್ಗೆ ಮಾತನಾಡಿ, “ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದಾರೆ, ಅವರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿದೆ?” ಎಂದು ಪ್ರಶ್ನಿಸಿದರು.

ಕೆ.ಎನ್​.ರಾಜಣ್ಣರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಮಾಡಿದ್ದೇ ನಾನು ಎಂಬ ಡಿ.ಕೆ.ಶಿವಕುಮಾರ್​ ಹೇಳಿಕೆಗೆ, “ಅಧಿಕಾರದಲ್ಲಿದ್ದಾಗ ನಾನು ಮಾಡಿದೆ, ಅವರು ಮಾಡಿದರು ಎನ್ನುವುದು ಮುಖ್ಯವಲ್ಲ. ಅದರ ಪ್ರಶ್ನೆಯೇ ಇಲ್ಲ. ಆಗ ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದರು, ಸರ್ಕಾರ ಮಾಡಿತ್ತು” ಎಂದು ಟಾಂಗ್ ಕೊಟ್ಟರು.


Spread the love

About Laxminews 24x7

Check Also

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

Spread the loveರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ