Breaking News

ರೈತರ ಆದಾಯ ದ್ವಿಗುಣಕ್ಕೆ ಮೋದಿ ಸರ್ಕಾರದಿಂದ ಸಹಕಾರ : B.S.Y.

Spread the love

ಬೆಂಗಳೂರು, ಜ.2- ರೈತರ ಆದಾಯವನ್ನು ದ್ವಿಗುಣಗೊಳಿಸುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಆಶಯವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪೂರಕ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ತಿಳಿಸಿದರು. ಇಂದು ಬಾಗಲಕೋಟೆ ತೋಟಗಾರಿಕಾ ವಿಶ್ವವಿದ್ಯಾಲಯ ಹಮ್ಮಿಕೊಂಡಿರುವ ತೋಟಗಾರಿಕಾ ಮೇಳವನ್ನು ಆನ್ ಲೈನ್ ಮೂಲಕ ಉದ್ಘಾಟಿಸಿ ಮಾತನಾಡುತ್ತಿದ್ದರು.

ಸಿಎಫ್‍ಟಿಆರ್‍ಐ ಹಾಗೂ ಭಾರತೀಯ ತೋಟಗಾರಿಕಾ ಸಂಸ್ಥೆಯ ಸಹಭಾಗಿತ್ವದೊಂದಿಗೆ ತೋಟಗಾರಿಕಾ ಉತ್ಪನ್ನಗಳ ಮೌಲ್ಯವರ್ಧನೆ,  ಸಂಸ್ಕರಣೆ, ದಾಸ್ತಾನು ಮತ್ತು ಪ್ಯಾಕೇಜಿಂಗ್ ಗಳ ಬಗ್ಗೆ ಹೊಸ ತಂತ್ರಜ್ಞಾನಗಳನ್ನು ಪರಿಚಯಿಸಲು ಉದ್ದೇಶಿಸಲಾಗಿದೆ. ಒಟ್ಟಾರೆ ತೋಟಗಾರಿಕೆಯನ್ನು ಉದ್ದಿಮೆಯಾಗಿ ಪರಿಗಣಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಪ್ರಧಾನ ಮಂತ್ರಿಯವರು 100ನೇ ಕಿಸಾನ್ ರೈಲಿಗೆ ಇತ್ತೀಚೆಗಷ್ಟೇ ಚಾಲನೆ ನೀಡಿದ್ದಾರೆ. ಮೂರು ತಿಂಗಳ ಅವಧಿಯಲ್ಲಿ ಕಿಸಾನ್ ರೈಲುಗಳ ಮೂಲಕ 27 ಸಾವಿರ ಟನ್ ಕೃಷಿ ಉತ್ಪನ್ನಗಳನ್ನು ಸಾಗಿಸಲಾಗಿದೆ. ಶೀಘ್ರವಾಗಿ ಕೊಳೆತುಹೋಗಬಹುದಾದ ದಾಳಿಂಬೆ, ಕಿತ್ತಳೆ ಹಾಗೂ ಇತರ ತೋಟಗಾರಿಕಾ ಬೆಳೆಗಳನ್ನು ಇತರ ರಾಜ್ಯಗಳಿಗೆ ಸಾಗಿಸಲು ಕೃಷಿ ರೈಲ್ ಯೋಜನೆಯ ಸೌಲಭ್ಯವನ್ನು ಬಳಸಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ತೋಟಗಾರಿಕಾ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕ ರಾಜ್ಯವು ತನ್ನ ಸ್ಥಾನವನ್ನು ಕಾಯ್ದುಕೊಂಡು ಇನ್ನೂ ಹೆಚ್ಚಿನ ಸಾಧನೆ ಮಾಡಲು ಪೂರಕ ಸಂಶೋಧನೆ, ವಿಸ್ತರಣೆ ಹಾಗೂ ಇತರ ಮೂಲಕಸೌಕರ್ಯ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಅವರು ನುಡಿದರು.. ಉಪ ಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಮಾತನಾಡಿ, ತೋಟಗಾರಿಕಾ ಪ್ರದೇಶ ವಿಸ್ತರಣೆಯಾಗುತ್ತಿರುವುದು ರೈತರಿಗೆ ತೋಟಗಾರಿಕೆ ಲಾಭದಾಯಕ ಎಂಬುದಕ್ಕೆ ನಿದರ್ಶನ


Spread the love

About Laxminews 24x7

Check Also

ಅಥಣಿ ನಗರದಲ್ಲಿ ಇಂದು ರೋಟರಿ ಸಂಸ್ಥೆ ಅಧೀನದಲ್ಲಿ ಶ್ರೀ ಜ್ಯೋತಿಬಾ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ರೋಟರಿ ಉದ್ಯಾನವನ

Spread the loveಅಥಣಿ ನಗರದಲ್ಲಿ ಇಂದು ರೋಟರಿ ಸಂಸ್ಥೆ ಅಧೀನದಲ್ಲಿ ಶ್ರೀ ಜ್ಯೋತಿಬಾ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ರೋಟರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ