Breaking News

ರಾಮೇಶ್ವರಂ ಕೆಫೆ ವಿರುದ್ಧದ ಎಫ್​ಐಆರ್​ಗೆ ತಡೆ ನೀಡಿದ ಹೈಕೋರ್ಟ್​

Spread the love

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ ರಾಮೇಶ್ವರಂ ಕೆಫೆ ಹೋಟೆಲ್ ಗೆ ಸಂಬಂಧಿಸಿದಂತೆ ಬಿಐಎಎಲ್​ ಪೊಲೀಸ್​ ಠಾಣೆಯಲ್ಲಿ ದಾಖಲಾಗಿರುವ ಎಫ್​ಐಆರ್​ ಕುರಿತು ಮುಂದಿನ ವಿಚಾರಣೆವರೆಗೂ ಹೈಕೋರ್ಟ್​ ಮಧ್ಯಂತರ ತಡೆ ನೀಡಿ ಆದೇಶಿಸಿದೆ.

ಈ ಸಂಬಂಧ ರಾಮೆಶ್ವರಂ ಕೆಫೆಯಲ್ಲಿ ಕಾರ್ಯನಿರ್ವಾಹಕ ಸುಮಂತ್​, ಮಾಲೀಕರಾದ ರಾಘವೇಂದ್ರ ರಾವ್​, ದಿವ್ಯಾ ರಾಘವೇಂದ್ರ ರಾವ್​ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮೊಹಮ್ಮದ್ ನವಾಜ್​ ಅವರಿದ್ದ ನ್ಯಾಯಪೀಠ, ಎಫ್​ಐಆರ್​ಗೆ ತಡೆ ನೀಡಿದ್ದು, ಸರ್ಕಾರ ಮತ್ತು ದೂರುದಾರರಿಗೆ ನೋಟಿಸ್​ ಜಾರಿ ಮಾಡಿ ವಿಚಾರಣೆ ಮುಂದೂಡಿದೆ. ಅರ್ಜಿದಾರರ ಪರ ವಾದವನ್ನು ಆಲಿಸಿದ ನ್ಯಾಯಪೀಠ, ಪ್ರಕರಣಕ್ಕೆ ಸಂಬಂಧಿಸಿದಂತೆ ವಿವರವಾದ ವಿಚಾರಣೆ ನಡೆಸಬೇಕಾದ ಅಗತ್ಯವಿದೆ ಎಂದು ತಿಳಿಸಿ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಇದಕ್ಕೂ ಮುನ್ನ ಅರ್ಜಿಯ ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರ, 2025ರ ಜುಲೈ 24ರಂದು ಘಟನೆ ನಡೆದಿದ್ದು, ಘಟನೆ ಸಂಬಂದ ಅರ್ಜಿದಾರರು ಅಂದೇ ದೂರು ದಾಖಲಿಸಿದ್ದು, ಪ್ರಕರಣವನ್ನು ವಯ್ಯಾಲಿ ಕಾವಲ್​ಗೆ ವರ್ಗಾವಣೆ ತನಿಖೆ ನಡೆಯುತ್ತಿದೆ. ಆದರೆ, ದೂರುದಾರರು ಅರ್ಜಿದಾರರ ವಿರುದ್ಧ ದೇವನಹಳ್ಳಿಯ ಜೆಎಂಎಫ್​ಸಿ ನ್ಯಾಯಾಲಯಕ್ಕೆ ಖಾಸಗಿ ದೂರು ದಾಖಲಿಸಿ ರಾಮೇಶ್ವರಂ ಕೆಫೆ ಮಾಲೀಕರ ವಿರುದ್ಧ ತನಿಖೆ ನಡೆಸಲು ಕೋರಿದ್ದಾರೆ. ಈ ಸಂಬಂಧ ನ್ಯಾಯಾಲಯವು ಬಿಐಎಎಲ್​ ಪೊಲೀಸ್​ ಠಾಣೆಗೆ ನೋಟಿಸ್​ ಜಾರಿ ಮಾಡಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ