Breaking News

ಸೌರವ್ ಗಂಗೂಲಿಗೆ ಲಘು ಹೃದಯಾಘಾತ..!

Spread the love

ನವದೆಹಲಿ,ಜ.2- ಮಾಜಿ ಕ್ರಿಕೆಟ್ ಆಟಗಾರ ಹಾಗೂ ಬಿಸಿಸಿಐನ ಅಧ್ಯಕ್ಷ ಸೌರವ್ ಗಂಗೂಲಿ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ಕೋಲ್ಕತ್ತಾದ ವುಡ್‍ಲ್ಯಾಂಡ್ ಆಸ್ಪತ್ರೆಗೆ ದಾಖಲಾಗಿದ್ದಾರೆ.  48 ವರ್ಷದ ಗಂಗೂಲಿ ಅವರಿಗೆ ಲಘು ಹೃದಯಾಘಾತ ವಾಗಿದೆ. ಅದೃಷ್ಟವಶಾತ್ ತೊಂದರೆಯೇನಿಲ್ಲ. ಈಗ ಅವರು ಅರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ತಮ್ಮ ಮನೆಯ ಜಿಮ್‍ನಲ್ಲಿ ವರ್ಕೌಟ್ ಮಾಡುತ್ತಿದ್ದಾಗ ಆಯಾಸಗೊಂಡಿದ್ದರು. ಕುಸಿದು ಬಿದ್ದರು ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ತಿಳಿದುಬಂದಿದೆ. ಪರೀಕ್ಷೆ ನಡೆಸಿರುವ ವೈದ್ಯರು ಲಘು ಹೃದಯಾಘಾತ ಸಂಭವಿಸಿದೆ. ಅವರಿಗೆ ಆಂಜಿಯೋಪ್ಲಾಸ್ಟಿ ನಡೆಸಿ ನಂತರ ಅವರನ್ನು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಟ್ವೀಟ್ ಮಾಡಿರುವ ಬೆಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಲಘು ಹೃದಯಾಘಾತಕ್ಕೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಂಗೂಲಿ ಅವರು ಬೇಗ ಚೇತರಿಸಿಕೊಂಡು ಆರೋಗ್ಯವಾಗಿ ಹಿಂದಿರುಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ಅಭಿಮಾನಿಗಳಿಗೆ ದಾದಾ ಎಂದೇ ಖ್ಯಾತಿಯಾಗಿರುವ ಸೌರವ್ ಗಂಗೂಲಿ 1992 ಮತ್ತು 2008 ರ ನಡುವೆ ರಾಷ್ಟ್ರೀಯ ಪರ ಆಡಿದ್ದರು. 2003 ರ ವಿಶ್ವಕಪ್ ಫೈನಲ್ ಸೇರಿದಂತೆ ಟೆಸ್ಟ್ ಮತ್ತು ಏಕದಿನ ಪಂದ್ಯಗಳಲ್ಲಿ (ಏಕದಿನ) ಭಾರತೀಯ ತಂಡದ ನಾಯಕತ್ವ ವಹಿಸಿದ್ದರು.


Spread the love

About Laxminews 24x7

Check Also

ಸಿಎಂ ಹುದ್ದೆಯ ರೇಸಿನಿಂದ ಹಿಂದೆ ಸರಿದವರು

Spread the love ಕಳೆದ ವಾರ ವಿದಾನಮಂಡಲ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಕುತೂಹಲಕಾರಿ ವಿಷಯವೊಂದು ಹೊರಬಿತ್ತು.ಅದರ ಪ್ರಕಾರ ಕರ್ನಾಟಕದಲ್ಲಿ ಮತ್ತೊಮ್ಮೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ