Breaking News

ಬಿಕ್ಲು ಶಿವ ಹತ್ಯೆ ಪ್ರಕರಣ: ಬೈರತಿ ಬಸವರಾಜ್ ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

Spread the love

ಬೆಂಗಳೂರು: ರೌಡಿಶೀಟರ್‌ ಶಿವಪ್ರಕಾಶ್‌ ಅಲಿಯಾಸ್‌ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿ ಆದೇಶಿಸಿದೆ.

ಪ್ರಕರಣದ 5ನೇ ಆರೋಪಿ ಬಿ.ಎ.ಬಸವರಾಜ್ ಅಲಿಯಾಸ್ ಬೈರತಿ ಬಸವರಾಜ್ ಸಲ್ಲಿಸಿದ್ದ ಅರ್ಜಿಯನ್ನು ಮಂಗಳವಾರ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದ್ದಾರೆ.

ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬೈರತಿ ಬಸವರಾಜ್ ಸೇರಿ ಐವರು ಆರೋಪಿಗಳ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ತಡೆ ಕಾಯ್ದೆ (ಕೊಕಾ) ಅನ್ವಯಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ಇದೇ ಡಿಸೆಂಬರ್ 19ರಂದು ರದ್ದುಪಡಿಸಿದ್ದ ಹೈಕೋರ್ಟ್, ಬೈರತಿ ಬಸವರಾಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿತ್ತು.

ಕೊಲೆ ಪ್ರಕರಣದಲ್ಲಿ ತನಿಖೆ ಇನ್ನಷ್ಟೇ ಪೂರ್ಣಗೊಳ್ಳಬೇಕಿದ್ದು, ಹೀನ ಕೃತ್ಯದಲ್ಲಿ ನಿರೀಕ್ಷಣಾ ಜಾಮೀನು ಮಂಜೂರು ಮಾಡುವ ಮೂಲಕ ತನಿಖೆಯಲ್ಲಿ ಮಧ್ಯಪ್ರವೇಶಿಸಲು ಬಯಸುವುದಿಲ್ಲ. ಆದ್ದರಿಂದ, ನಿರೀಕ್ಷಣಾ ಜಾಮೀನು ಕೋರಿರುವ ಅರ್ಜಿ ತಿರಸ್ಕರಿಸಲಾಗಿದೆ ಎಂದು ಹೈಕೋರ್ಟ್ ಆದೇಶದಲ್ಲಿ ಹೇಳಿತ್ತು.

ಹೈಕೋರ್ಟ್ ತೀರ್ಪು ಪ್ರಕಟಿಸಿದ ಬಳಿಕ ಬೈರತಿ ಬಸವರಾಜ್ ಪರ ವಕೀಲರು, ಕೊಕಾ ಅನ್ವಯಿಸಿರುವ ಆದೇಶ ವಜಾಗೊಂಡಿರುವುದರಿಂದ ವಿಚಾರಣಾ ನ್ಯಾಯಾಲಯದಲ್ಲಿ ಬೈರತಿ ಬಸವರಾಜ್ ಅವರು ನಿರೀಕ್ಷಣಾ ಜಾಮೀನು ಕೋರುವವರೆಗೆ ರಕ್ಷಣೆ ಒದಗಿಸಬೇಕು ಎಂದು ಕೋರಿದ್ದರು. ಇದಕ್ಕೂ ಸಹ ಹೈಕೋರ್ಟ್ ನಿರಾಕರಿಸಿತ್ತು.


Spread the love

About Laxminews 24x7

Check Also

ಸಿಎಂಗೆ ಯಾರೋ ಮಾಟ ಮಂತ್ರ ಮಾಡಿಸಿರಬಹುದು, ಜನ್ರೂ ಮಾತಾಡಿಕೊಳ್ತಿದ್ದಾರೆ: ರಾಜಣ್ಣ

Spread the loveಬೆಂಗಳೂರು: ಸಿಎಂ ಇಷ್ಟೊಂದು ಅಸಹಾಯಕ ರೀತಿಯಲ್ಲಿದ್ದಾರೆ ಅಂದ್ರೆ ಯಾರೋ ಮಾಟ ಮಂತ್ರ ಮಾಡಿಸಿರಬಹುದಾ ಅಂತ ಯೋಚನೆ ಮಾಡ್ತಿದ್ದೇನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ