ಇಂದು ಗೋಕಾಕದ ಸರ್ಕಾರಿ ಪಿ.ಯು. ಕಾಲೇಜಿನಲ್ಲಿ ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾಡಳಿತ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಹಯೋಗದಲ್ಲಿ ಹಮ್ಮಿಕೊಂಡ ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾ ಮಟ್ಟದ ‘ಪ್ರತಿಭಾ ಕಾರಂಜಿ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದೆ.
ಮಕ್ಕಳ ಸಾಂಸ್ಕೃತಿಕ, ಕಲಾತ್ಮಕ ಹಾಗೂ ಸೃಜನಶೀಲ ಪ್ರತಿಭೆಗಳ ಸಂಗಮಕ್ಕೆ ಸಾಕ್ಷಿಯಾದ ಈ ಕಾರ್ಯಕ್ರಮವು, ವಿದ್ಯಾರ್ಥಿಗಳಲ್ಲಿ ಅಡಗಿರುವ ಹಾಡು, ನೃತ್ಯ, ನಾಟಕ, ಚಿತ್ರಕಲೆ ಸೇರಿದಂತೆ ವಿವಿಧ ಪ್ರತಿಭೆಗಳನ್ನು ಗುರುತಿಸಿ, ಬೆಳೆಸುವ ಮಹತ್ವದ ವೇದಿಕೆಯಾಗಿದೆ.
ಪ್ರತಿಭಾ ಕಾರಂಜಿ ಮಕ್ಕಳ ಆತ್ಮವಿಶ್ವಾಸವನ್ನು ಹೆಚ್ಚಿಸುವುದರ ಜೊತೆಗೆ, ಅವರ ವ್ಯಕ್ತಿತ್ವ ವಿಕಾಸಕ್ಕೆ ದಾರಿ ಮಾಡಿಕೊಡುತ್ತದೆ. ವಿದ್ಯಾರ್ಥಿಗಳಿಗೆ ಅವಕಾಶ ಒದಗಿಸಿ, ಭವಿಷ್ಯದ ಸಾಧಕರನ್ನು ರೂಪಿಸುವಲ್ಲಿ ಇಂತಹ ಕಾರ್ಯಕ್ರಮಗಳು ಮಹತ್ತರ ಪಾತ್ರ ವಹಿಸುತ್ತವೆ.
Laxmi News 24×7