ಪೋಕ್ಸೊ ಪ್ರಕರಣ ದಾಖಲಿಸದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಒತ್ತಡ: ಸಂಜಯ ಪಾಟೀಲ ಆರೋಪ
ಬೆಳಗಾವಿ :ಗ್ರಾಮೀಣ ಕ್ಷೇತ್ರದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಸರ್ಕಾರಿ ಶಾಲೆಯೊಂದರ ಮುಖ್ಯ ಶಿಕ್ಷಕನ ವಿರುದ್ಧ ಪೋ ಕಾಯ್ದೆಯಡಿ ಪ್ರಕರಣ ದಾಖಲಿಸದಂತೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರು ಪೊಲೀಸರ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಮಾಜಿ ಶಾಸಕ ಸಂಜಯ ಪಾಟೀಲ ಆರೋಪಿಸಿದರು.
ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಂಭೀರವಾಗಿ ಪ್ರಕರಣವನ್ನು ಪರಿಗಣಿಸಿ ಸಂತ್ರಸ್ತೆ ವಿದ್ಯಾರ್ಥಿನಿಗೆ ನ್ಯಾಯ ಒದಗಿಸಬೇಕು. ತಪ್ಪಿತಸ್ಥ ಮುಖ್ಯ ಶಿಕ್ಷಕನ ವಿರುದ್ದ ತಕ್ಷಣವೇ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.
ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ಸಂತ್ರಸ್ತೆ ವಿದ್ಯಾರ್ಥಿನಿಯನ್ನು ಭೇಟಿಯಾಗಿ ಕನಿಷ್ಠ ಪಕ್ಷ ಸಾಂತ್ವನವನ್ನು ಹೇಳಿಲ್ಲ. ಆರೋಪಿಯನ್ನು ರಕ್ಷಣೆ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು.
Laxmi News 24×7