Breaking News

ಹುಬ್ಬಳ್ಳಿ ಗರ್ಭಿಣಿ ಕೊಲೆ ಪ್ರಕರಣ: ಕರ್ತವ್ಯಲೋಪದಡಿ ಇಬ್ಬರು ಪೊಲೀಸ್​ ಸಿಬ್ಬಂದಿ ಅಮಾನತು, ಸಂತ್ರಸ್ತ ಕುಟುಂಬ ಭೇಟಿ ಮಾಡಿದ ಡಿಸಿ, ಶಾಸಕರು

Spread the love

ಹುಬ್ಬಳ್ಳಿ: ತಾಲೂಕಿನ ಇನಾಂವೀರಾಪುರ ಗ್ರಾಮದಲ್ಲಿ ಅನ್ಯಜಾತಿ ಯುವಕನ ಮದುವೆಯಾಗಿದ್ದಕ್ಕೆ ಗರ್ಭಿಣಿ ಮೇಲೆ ಆಕೆಯ ತಂದೆ, ಕುಟುಂಬಸ್ಥರು ಹಲ್ಲೆಗೈದು, ಭೀಕರವಾಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪದ ಮೇಲೆ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಠಾಣೆಯ ವಿಶೇಷ ವಿಭಾಗದ ಕಾನ್‌ಸ್ಟೇಬಲ್‌ ಸಂಗಮೇಶ ಸಾಗರ ಮತ್ತು ಬೀಟ್ ಕಾನ್‌ಸ್ಟೇಬಲ್‌ ಚಂದ್ರಕಾಂತ ರಾಥೋಡ ಅಮಾನತಾಗಿರುವ ಪೊಲೀಸ್​ ಸಿಬ್ಬಂದಿ. ಕೃತ್ಯದ ಕುರಿತು ಸರಿಯಾದ ಮಾಹಿತಿ ನೀಡದ ಕಾರಣ ಇಲಾಖೆಯ ಆಂತರಿಕ ತನಿಖೆ ಕಾಯ್ದಿರಿಸಿ, ಮುಂದಿನ ಅದೇಶದವರೆಗೆ ಅಮಾನತು ಮಾಡಿ ಆದೇಶಿಸಿರುವುದಾಗಿ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮಂಗಳವಾರ ತಡರಾತ್ರಿ ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಸಪ್ಪ ಸೋಲಾರಾಗೊಪ್ಪ ಮತ್ತು ಅನಿಲಗೌಡ ಪಾಟೀಲ ಎಂಬುವರನ್ನು ಬಂಧಿಸಿದ್ದು, ಬಂಧಿತರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ. ಕೊಲೆ ಕೃತ್ಯದ ಸಂಬಂಧ 14ಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಸಮುದಾಯ ಭವನ ನಿರ್ಮಾಣಕ್ಕೆ ಪೂಜೆ ನೆರವೇರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ 1.50 ಕೋಟಿ ರೂಪಾಯಿ ವೆಚ್ಚದ ಕಟ್ಟಡದ ಕಾಮಗಾರಿಗೆ ಚಾಲನೆ

Spread the love ಸಮುದಾಯ ಭವನ ನಿರ್ಮಾಣಕ್ಕೆ ಪೂಜೆ ನೆರವೇರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ 1.50 ಕೋಟಿ ರೂಪಾಯಿ ವೆಚ್ಚದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ