ಮೈಸೂರು: “ಮೈಸೂರು ಅರಮನೆ ಮುಂಭಾಗ ಸಂಭವಿಸಿದ ಸ್ಫೋಟ ಅನಿರೀಕ್ಷಿತ. ಸಿಲಿಂಡರಿನ ತಾಪಮಾನ ಹೆಚ್ಚಾಗಿ ಸ್ಫೋಟಗೊಂಡಿದೆ” ಎಂದು ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಹೇಳಿದರು.
“ನಿನ್ನೆ ರಾತ್ರಿ ಸುಮಾರು 8.30ರ ಸುಮಾರಿಗೆ ಘಟನೆ ನಡೆದಿದೆ. ಸಿಲಿಂಡರ್ ಸ್ಫೋಟಗೊಂಡು ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ. ಪ್ರವಾಸಕ್ಕೆ ಬಂದಿದ್ದ ಐವರಿಗೆ ಗಾಯವಾಗಿದೆ. ಇಬ್ಬರ ಸ್ಥಿತಿ (ಲಕ್ಷ್ಮಿ ಹಾಗೂ ಮಂಜುಳ) ಗಂಭೀರವಾಗಿದೆ. ಮೃತಪಟ್ಟ ವ್ಯಕ್ತಿ ಉತ್ತರ ಪ್ರದೇಶದವರಾಗಿದ್ದು ಸೀಸನಲ್ ವ್ಯಾಪಾರಿ. ಈ ಬಾರಿ ಬಲೂನ್ ಮಾರಾಟ ಮಾಡುತ್ತಿದ್ದರು. ಹೊರಗಡೆಯಿಂದ ಗ್ಯಾಸ್ ಸಿಲಿಂಡರ್ ತಂದು ಅವರು ಬಲೂನ್ ವ್ಯಾಪಾರ ಮಾಡುತ್ತಿದ್ದರು. ಆ ಸಿಲಿಂಡರ್ ತಾಪಮಾನ ಹೆಚ್ಚಾಗಿ ಸ್ಫೋಟಗೊಂಡಿದೆ” ಎಂದು ತಿಳಿಸಿದರು.
Laxmi News 24×7