ಮಂಡ್ಯ : ನವೆಂಬರ್ ಕ್ರಾಂತಿನೂ ಇಲ್ಲ, ಸಂಕ್ರಾಂತಿ ಕ್ರಾಂತಿನೂ ಇಲ್ಲ, ಯುಗಾದಿಗೂ ಇಲ್ಲ. 2028ಕ್ಕೆ ಮತ್ತೆ ನಾವೇ, ಕಾಂಗ್ರೆಸ್ ಕ್ರಾಂತಿ ಎಬ್ಬಿಸುತ್ತೆ ಎಂದು ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು.
ಈ ಕುರಿತು ಭಾನುವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಇಂದು ಅತ್ಯಂತ ಸಂತೋಷದ ದಿನ. ಈ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಕಾಂಗ್ರೆಸ್ ಪಕ್ಷದ ಸಂಸ್ಥಾಪನಾ ದಿನ. ನಾವು ಕೂಡ ಆಚರಣೆ ಮಾಡಿ ಗೌರವ ಸಲ್ಲಿಸಿದ್ದೇವೆ ಎಂದಿದ್ದಾರೆ.
ಬೆಂಗಳೂರಿನಲ್ಲಿ ಮನೆಗಳ ಒತ್ತುವರಿ ತೆರವು ಸಂಬಂಧ ಕೇರಳ ಸಿಎಂ ಆರೋಪ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕಾನೂನು ಎಲ್ಲರಿಗೂ ಒಂದೇ. ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯದಲ್ಲಿ ಬೇರೆ ರಾಜ್ಯದವರು ಇರುತ್ತಾರೆ.
Laxmi News 24×7