Breaking News

ಧಾರವಾಡದಲ್ಲಿ ಬೀದಿಗೆ ಇಳಿದ ಮೆಕ್ಕೆ ಜೋಳ ಬೆಳೆದ ರೈತರು .

Spread the love

ಧಾರವಾಡದಲ್ಲಿ ಬೀದಿಗೆ ಇಳಿದ ಮೆಕ್ಕೆ ಜೋಳ ಬೆಳೆದ ರೈತರು …….ಮುಗಿಯದ ಗೋವಿನ ಜೋಳ ಖರೀದಿ ಕೇಂದ್ರದ ಸಮಸ್ಯೆ, ಮತ್ತೆ ಪ್ರತಿಭಟನೆಗಿಳಿದ ರೈತರು.
: ಸರ್ಕಾರಿ ಖರೀದಿ ಕೇಂದ್ರ ತೆರೆದು ಬೆಂಬಲ ಬೆಲೆಯಡಿ ಗೋವಿನ ಜೋಳ ಖರೀದಿ ಮಾಡಬೇಕು ಎಂದು ರೈತರು ಆಗ್ರಹಿಸುತ್ತಲೇ ಇದ್ದಾರೆ. ಆದರೆ, ಸರ್ಕಾರ ಖರೀದಿ ಕೇಂದ್ರ ತೆರೆಯದೇ ಕೆಎಂಎಫ್ ಹಾಗೂ ಸಕ್ಕರೆ ಕಾರ್ಖಾನೆಗಳ ಮೂಲಕ ಗೋವಿನ ಜೋಳ ಖರೀದಿ ಮಾಡುತ್ತಿದೆ.
ಕೆಎಂಎಫ್ ಹಾಗೂ ಸಕ್ಕರೆ ಕಾರ್ಖಾನೆಗಳಲ್ಲಿ ಕಡಿಮೆ ಗೋವಿನ ಜೋಳ ಖರೀದಿ ಮಾಡುತ್ತಿದ್ದು, ಇದು ರೈತರಿಗೆ ಅನ್ಯಾಯ ಮಾಡಿದಂತಾಗುತ್ತಿದೆ. ಕೂಡಲೇ ಸರ್ಕಾರವೇ ಬೆಂಬಲ ಬೆಲೆಯಡಿ ಖರೀದಿ ಕೇಂದ್ರ ತೆರೆದು ಗೋವಿನ ಜೋಳ ಖರೀದಿ ಮಾಡಬೇಕು ಎಂದು ಆಗ್ರಹಿಸಿ ಇದೀಗ ಮತ್ತೆ ರೈತರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರ ರೈತರ ನೆರವಿಗೆ ಬರುತ್ತಿಲ್ಲ.
ಗೋವಿನ ಜೋಳಕ್ಕೆ ಬೆಂಬಲ ಬೆಲೆ ನಿಗದಿ ಮಾಡಿ ಖರೀದಿ ಕೇಂದ್ರ ತೆರೆಯಬೇಕು ಎಂದು ಆಗ್ರಹಿಸುತ್ತ ಬಂದಿದ್ದರೂ ಸರ್ಕಾರ ಮಾತ್ರ ಮೊಂಡುತನ ಪ್ರದರ್ಶಿಸುತ್ತಿದೆ. ಕೂಡಲೇ ಸರ್ಕಾರ ಖರೀದಿ ಕೇಂದ್ರ ತೆರೆದು ರೈತರ ನೆರವಿಗೆ ಧಾವಿಸಬೇಕು ಎಂದು ರೈತ ಮುಖಂಡರು ಆಗ್ರಹಿಸಿದರು.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ