ರಾಯಬಾಗ ತಾಲೂಕಿನ ಬಾವನ ಸೌಂದತ್ತಿ ಗ್ರಾಮದ ಕೃಷ್ಣಾ ನದಿಯ ದಡದಲ್ಲಿ ಕೈಗೊಳ್ಳಲಾದ, ರಾಯಬಾಗ ತಾಲೂಕಿನ 19 ಗ್ರಾಮಗಳ 39 ಕೆರೆಗಳಿಗೆ ನೀರು ತುಂಬಿಸುವ ಮಹತ್ವಾಕಾಂಕ್ಷಿ ಏತ ನೀರಾವರಿ ಯೋಜನೆಯ ಕಾಮಗಾರಿ ಪ್ರಾಯೋಗಿಕವಾಗಿ ಚಾಲನೆಯಲ್ಲಿದ್ದು, ಈ ಹಿನ್ನೆಲೆಯಲ್ಲಿ ಇಂದು ಹುಬ್ಬರವಾಡಿ, ಬೂದಿಹಾಳ,

ಮೇಖಳಿ ಹಾಗೂ ಮಾಡಲಗಿ ಗ್ರಾಮಗಳಿಗೆ ಸಚಿವ ಸತೀಶ್ ಜಾರಕಿಹೊಳಿ ಅವರು ಭೇಟಿ ನೀಡಿ ಕೆರೆಗಳ ಪರಿಶೀಲನೆ ನಡೆಸಿದರು.

ಬೇಸಿಗೆಯಲ್ಲಿ ತೀವ್ರ ನೀರಿನ ಅಭಾವವನ್ನು ಎದುರಿಸುತ್ತಿದ್ದ ರಾಯಬಾಗ ತಾಲೂಕಿನ 19 ಗ್ರಾಮಗಳಿಗೆ ಈ ಯೋಜನೆ ಜಾರಿಗೊಳಿಸಿರುವುದು ಅತ್ಯಂತ ಹೆಮ್ಮೆಯ ವಿಷಯ. ಈ ಯೋಜನೆಯಿಂದ ಗ್ರಾಮೀಣ ಪ್ರದೇಶಗಳ ಕೃಷಿ, ಕುಡಿಯುವ ನೀರು ಮತ್ತು ಪರಿಸರಕ್ಕೆ ಶಾಶ್ವತ ಪರಿಹಾರ ದೊರೆಯಲಿದೆ ಎಂದರು
ಈ ಸಂದರ್ಭದಲ್ಲಿ ಗ್ರಾಮಸ್ಥರು ತುಂಬಿದ ಕೆರೆಗಳಿಗೆ ಬಾಗಿನ ಅರ್ಪಿಸಿ ಸಂತಸ ವ್ಯಕ್ತಪಡಿಸಿದರು. ಜೊತೆಗೆ ನನ್ನನ್ನು ಆತ್ಮೀಯವಾಗಿ ಸತ್ಕರಿಸಿ ಗೌರವಿಸಿದರು.

ಈ ವೇಳೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಹಾವೀರ ಮೋಹಿತೆ, ಡಿಸಿಸಿ ಬ್ಯಾಂಕ್ ನಿರ್ದೇಶಕ ಅಪ್ಪಾಸಾಹೇಬ ಕುಲಗುಡೆ, ಮುಖಂಡರಾದ ಅಮಿತ ಘಾಟಗೆ ಸೇರಿದಂತೆ ಅನೇಕ ಸ್ಥಳೀಯ ನಾಯಕರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
Laxmi News 24×7