ಬೀದರ್ : ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಆರಂಭಿಸಿರುವ ಬೀದರ್ ಜಿಲ್ಲಾ ಪೊಲೀಸ್ ಅಕ್ಕ ಪಡೆ ಈಗಾಗಲೇ ರಾಜ್ಯಕ್ಕೆ ಮಾದರಿಯಾಗಿ ಗುರುತಿಸಿಕೊಂಡಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಬಿ. ಖಂಡ್ರೆ ಹೇಳಿದರು.
ಮಂಗಳವಾರ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಅಕ್ಕ ಪಡೆಗೆ ನಿಯೋಜಿಸಲಾದ ವಾಹನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ಹಾಗೂ ತರಬೇತಿ ಪಡೆದ ಎನ್‌ಸಿಸಿ ಕೆಡೆಟ್ಗಳೊಂದಿಗೆ ಕಾರ್ಯನಿರ್ವಹಿಸುತ್ತಿರುವ ಅಕ್ಕ ಪಡೆ, ಸಾರ್ವಜನಿಕ ಸ್ಥಳಗಳಲ್ಲಿ ಗಸ್ತು ತಿರುಗುವ ಮೂಲಕ ಮಹಿಳೆಯರು ಮತ್ತು ಮಕ್ಕಳಿಗೆ ಸುರಕ್ಷತೆ ಒದಗಿಸುತ್ತಿದೆ. ಸಮಾಜದಲ್ಲಿ ಸುರಕ್ಷತೆ ಮತ್ತು ಜಾಗೃತಿಯ ಕಿರು ಸೇತುವೆಯಾಗಿ ಅಕ್ಕ ಪಡೆ ಕಾರ್ಯನಿರ್ವಹಿಸುತ್ತಿದ್ದು, ಮಹಿಳಾ ಸಬಲೀಕರಣದ ದಿಕ್ಕಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
Laxmi News 24×7