Breaking News

ಖಾನಾಪುರ ಪಟ್ಟಣದಲ್ಲಿ ಹೆಚ್ಚಿದ ನಾಯಿಗಳ ಹಾವಳಿ: ಪಟ್ಟಣ ಪಂಚಾಯಿತಿ ಅಧಿಕಾರಿಗಳ ವಿರುದ್ಧ ಇಸಾಕ್ ಖಾನ್ ಪಠಾಣ್ ಆಕ್ರೋಶ

Spread the love

ಖಾನಾಪುರ ಪಟ್ಟಣದಲ್ಲಿ ಹೆಚ್ಚಿದ ನಾಯಿಗಳ ಹಾವಳಿ: ಪಟ್ಟಣ ಪಂಚಾಯಿತಿ ಅಧಿಕಾರಿಗಳ ವಿರುದ್ಧ ಇಸಾಕ್ ಖಾನ್ ಪಠಾಣ್ ಆಕ್ರೋಶMay be an image of dog
ಖಾನಾಪುರ ಪಟ್ಟಣದಲ್ಲಿ ಹೆಚ್ಚಿದ ನಾಯಿಗಳ ಹಾವಳಿ
ಪಟ್ಟಣ ಪಂಚಾಯಿತಿ ಅಧಿಕಾರಿಗಳ ವಿರುದ್ಧ ಇಸಾಕ್ ಖಾನ್ ಪಠಾಣ್ ಆಕ್ರೋಶ
ಸಾರ್ವಜನಿಕರ ರಕ್ಷಣೆಗೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸ್ಥಳೀಯರ ಆಕ್ರೋಶ
ಶೀಘ್ರವೇ ಕ್ರಮ ಕೈಗೊಳ್ಳದಿದ್ದರೇ ತೀವ್ರ ಪ್ರತಿಭಟನೆಯ ಎಚ್ಚರಿಕೆMay be an image of animal and street
ಖಾನಾಪುರ ಪಟ್ಟಣದ ಪ್ರಮುಖ ರಸ್ತೆ ಹಾಗೂ ಗಲ್ಲಿಗಳಲ್ಲಿ ಬೀದಿ ನಾಯಿಗಳ ಹಾವಳಿ ಮಿತಿಮೀರಿದ್ದು, ಸಾರ್ವಜನಿಕರು ಹಾಗೂ ಮಕ್ಕಳಲ್ಲಿ ಭೀತಿಯ ವಾತಾವರಣ ನಿರ್ಮಾಣವಾಗಿದೆ.
ನಾಯಿಗಳ ಗುಂಪು ಪಟ್ಟಣದಾದ್ಯಂತ ರಾಜಾರೋಷವಾಗಿ ಸಂಚರಿಸುತ್ತಿದ್ದು, ಜನಸಾಮಾನ್ಯರು ರಸ್ತೆಯಲ್ಲಿ ಓಡಾಡಲು ಹೆದರುವಂತಾಗಿದೆ. ಈ ಬಗ್ಗೆ ಖಾನಾಪುರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಸ್. ಎಮ್. ಕುರಬೆಟ್ಟ ಹಾಗೂ ಇತರ ಅಧಿಕಾರಿಗಳು ಸಂಪೂರ್ಣ ನಿರ್ಲಕ್ಷ್ಯ ವಹಿಸಿದ್ದು, ಸಾರ್ವಜನಿಕರ ರಕ್ಷಣೆಗೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಖಾನಾಪುರ ಸಿಟಿ ಯುವ ಕಾಂಗ್ರೆಸ್ ಅಧ್ಯಕ್ಷ ಇಸಾಕ್ ಖಾನ್ ಪಠಾಣ್ ಅವರು, ಪಟ್ಟಣ ಪಂಚಾಯಿತಿ ಅಧಿಕಾರಿಗಳು ನಾಯಿಗಳ ಹಾವಳಿಯನ್ನು ಗಂಭೀರವಾಗಿ ಪರಿಗಣಿಸದೆ ಕಣ್ಣುಮುಚ್ಚಿ ಕುಳಿತಿದ್ದಾರೆ ಎಂದು ಆರೋಪಿಸಿದರು. ಅನಾಹುತಗಳು ಸಂಭವಿಸುವ ಮುನ್ನವೇ ಎಚ್ಚೆತ್ತುಕೊಂಡು, ನಾಯಿಗಳ ನಿಯಂತ್ರಣಕ್ಕೆ ಅಧಿಕಾರಿಗಳು ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಈ ಸಂದರ್ಭದಲ್ಲಿ ಪಟ್ಟಣದ ಪ್ರಮುಖರು ಉಪಸ್ಥಿತರಿದ್ದು, ಶೀಘ್ರವೇ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.

Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ