ಬೆಳಗಾವಿ: ಕಿಡಿಗೇಡಿಯೋರ್ವ ಇಲ್ಲಿನ ಕೇಂದ್ರ ಕಾರಾಗೃಹದ ಗೋಡೆಯ ಮೇಲಿಂದ ಮೊಬೈಲ್, ಡ್ರಗ್ಸ್ ಎಸೆದಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಡಿ.29ರ ಮಧ್ಯರಾತ್ರಿ ಘಟನೆ ನಡೆದಿದೆ.
ಹಿಂಡಲಗಾ ಗ್ರಾಮದಲ್ಲಿರುವ ಜೈಲಿಗೆ ಬೆಳಗ್ಗೆ 3 ಗಂಟೆಗೆ ಮುಖಕ್ಕೆ ಮಾಸ್ಕ್ ಕಟ್ಟಿಕೊಂಡು ಬಂದಿರುವ ಆತ, ಬಟ್ಟೆಯಲ್ಲಿ ಕಟ್ಟಿದ ವಸ್ತುಗಳನ್ನು ಎಸೆದು ಪರಾರಿಯಾಗಿದ್ದಾನೆ.![]()
ಜೈಲಿನ ಸಹಾಯಕ ಅಧೀಕ್ಷಕ ಮಲ್ಲಿಕಾರ್ಜುನ ಕೊಣ್ಣೂರ ಅವರು ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ, ಡಿ.29ರಂದು ಕಾರಾಗೃಹದ ಮುಖ್ಯ ವೀಕ್ಷಕ ಡಿ.ಎಂ.ಗೋಠೆ ಅವರು ಕರ್ತವ್ಯ ನಿರ್ವಹಿಸುತ್ತಿರುವಾಗ ಸರ್ಕಲ್ ನಂ.2, ಬ್ಯಾರೆಕ್ ನಂ.2 ಮೂಲೆಯಲ್ಲಿ ಒಂದು ಮೊಬೈಲ್ ಪತ್ತೆಯಾಗಿದೆ. ನಿಷೇಧಿತ ವಸ್ತುವನ್ನು ಇಟ್ಟುಕೊಂಡಿರುವ ಮತ್ತು ಬಳಸಿರುವ ಕೈದಿಗಳನ್ನು ಪತ್ತೆ ಮಾಡಬೇಕು ಎಂದು ತಿಳಿಸಿದ್ದಾರೆ.
ಜೈಲಿನ ಹೊರಗಡೆಯ ಇಂಥ ಕೃತ್ಯಗಳನ್ನು ಹತೋಟಿಗೆ ತರಲು ಪೊಲೀಸರು, ಜೈಲು ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ.
ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಂಡಿದ್ದಾರೆ.
Laxmi News 24×7