Breaking News

ಸುಗಮ ಸಂಚಾರಕ್ಕಾಗಿ ಹೆಬ್ಬಾಳ ಮೇಲ್ಸೇತುವೆ ಎರಡನೇ ಲೂಪ್ ಉದ್ಘಾಟಿಸಿದ ಡಿಸಿಎಂ ಡಿಕೆಶಿ

Spread the love

ಬೆಂಗಳೂರು: ಹೆಬ್ಬಾಳ ಮೇಲ್ಸೇತುವೆಯ ಎರಡನೇ ಲೂಪ್ ಅನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಉದ್ಘಾಟಿಸಿದರು.‌ ಆ ಮೂಲಕ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಬೆಂಗಳೂರಿನ ಉತ್ತರ ಭಾಗದ ಜನರಿಗೆ ವಾಹನ ಸಂಚಾರ ಸುಗಮವಾಗಲಿದೆ.DCM DK Shivakumar inaugurated the second loop of Hebbal flyover

ಇದೇ ವೇಳೆ ಮಾತನಾಡಿದ ಅವರು, “ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಬೆಂಗಳೂರಿನ ಉತ್ತರ ಭಾಗದ ಜನರ ಸುಗಮ ವಾಹನ ಸಂಚಾರಕ್ಕಾಗಿ ಹೆಬ್ಬಾಳ ಮೇಲ್ಸೇತುವೆಯ ಎರಡನೇ ಲೂಪ್ ಅನ್ನು ಇಂದು ಉದ್ಘಾಟನೆ ಮಾಡಿದ್ದೇವೆ. ಈ ಭಾಗದ ಜನರು ಹೆಬ್ಬಾಳ ಮೇಲ್ಸೇತುವೆ ಬಳಿ ಸಂಚಾರ ದಟ್ಟಣೆ ದೂರು ಹೇಳುತ್ತಿದರು. ಹೀಗಾಗಿ ನಾವು ತ್ವರಿತ ಗತಿಯಲ್ಲಿ ಪರಿಹಾರ ಕಂಡು ಹಿಡಿದಿದ್ದೇವೆ. ಆಮೂಲಕ ಸಂಚಾರ ದಟ್ಟಣೆ ನಿವಾರಿಸಿದ್ದೇವೆ” ಎಂದು ತಿಳಿಸಿದರು.ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಈ ವರ್ಷ 50ನೇ ವಸಂತಕ್ಕೆ ಕಾಲಿಟ್ಟಿದ್ದು, ನನ್ನ ರಾಜಕೀಯ ಜೀವನದಲ್ಲಿ ಹಿಂದೆಂದೂ ಮಾಡಲಾಗದ ಐತಿಹಾಸಿಕ ಯೋಜನೆಗಳನ್ನು ಹಮ್ಮಿಕೊಂಡಿದೆ. 120 ಕಿ.ಮೀ ಉದ್ದದ ಬೆಂಗಳೂರು ಬಿಸಿನೆಸ್ ಕಾರಿಡಾರ್ (ಬಿಬಿಸಿ) ಅನ್ನು ಕಾರ್ಯರೂಪಕ್ಕೆ ತರಲು ರೈತರ ಬಳಿ ಭೂಸ್ವಾಧೀನ ಮಾಡಿಕೊಳ್ಳಲಾಗುತ್ತಿದೆ. ಇದಕ್ಕೆ 35% ವಾಣಿಜ್ಯ ಭೂಮಿಯನ್ನು ರೈತರಿಗೆ ಪರಿಹಾರವಾಗಿ ನೀಡಲಾಗುತ್ತಿದೆ. ಜತೆಗೆ ಸಣ್ಣ ಟೌನ್ ಶಿಪ್ ನಿರ್ಮಾಣಕ್ಕೆ ರೈತರಿಗೆ ಉತ್ತಮ ಪರಿಹಾರ ನೀಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಈ ಭಾಗದಲ್ಲಿ ಒಂದೂವರೇ ಕಿ.ಮೀ ಟನಲ್ ರಸ್ತೆ ಬರಲಿದೆ. ಮೇಕ್ರಿ ವೃತ್ತದ ಬಳಿ ಮೇಲ್ಸೇತುವೆ ಸಾಗಲಿದೆ. ಇದನ್ನು ಮೂರು ಭಾಗವಾಗಿ ಕಟ್ಟಲಾಗುವುದು. ಇನ್ನು ತುಮಕೂರು ರಸ್ತೆಯಿಂದ ಕೆ.ಆರ್ ಪುರದ ವರೆಗೆ ಮೇಲ್ಸೇತುವೆ ಮೂಲಕ ಹೊರ ವರ್ತುಲ ರಸ್ತೆ (ಒಆರ್ ಆರ್) ಮಾಡಲು ಮುಂದಾಗಿದ್ದೇವೆ” ಎಂದು ವಿವರಿಸಿದರು.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ