ನಿಪ್ಪಾಣಿ: ಸೈನಿಕರು ದೇಶದ ಶಾಂತಿ ಹಾಗೂ ನಮ್ಮ ಜೀವ ಕಾಪಾಡುವ ರಕ್ಷಕರು. ವೃತ್ತಿಯಲ್ಲಿ ತಮ್ಮನ್ನು ತೊಡಗಿಸಿಕೊಂಡು ದೇಶ ಸೇವೆ ತೊಡಗಿರುವುದು ಶ್ಲಾಘನೀಯ ಎಂದು ಚಿಕ್ಕೋಡಿ ಲೋಕಸಭಾ ಸದಸ್ಯೆ ಪ್ರಿಯಾಂಕಾ ಜಾರಕಿಹೊಳಿ ಅವರು ಹೇಳಿದರು.

ತಾಲೂಕಿನ ತವಂದಿ ಗ್ರಾಮದಲ್ಲಿ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ 20.00 ಲಕ್ಷ ರೂ. ವೆಚ್ಚದಲ್ಲಿ ಮಂಜೂರಾದ ಮಾಜಿ ಸೈನಿಕರ ಭವನದ ನಿರ್ಮಾಣ ಕಾಮಗಾರಿಗೆ ಅಡಿಗಲ್ಲು ಸಮಾರಂಭ ನೆರವೇರಿಸಿ ಅವರು ಮಾತನಾಡಿದರು.

ದೇಶ ರಕ್ಷಣೆಗೆ ಅಮೂಲ್ಯ ಸೇವೆ ಸಲ್ಲಿಸಿದ ಮಾಜಿ ಸೈನಿಕರ ಗೌರವ ಮತ್ತು ಸೌಲಭ್ಯಗಳನ್ನು ಇನ್ನಷ್ಟು ಬಲಪಡಿಸಲಾಗುವುದು. ಮಾಜಿ ಸೈನಿಕರ ಭವನವು ಶೀಘ್ರದಲ್ಲೇ ಪೂರ್ಣಗೊಂಡು, ಮಾಜಿ ಸೈನಿಕರು ಹಾಗೂ ಅವರ ಕುಟುಂಬಗಳಿಗೆ ಉಪಯುಕ್ತವಾಗಲಿ ಎಂದು ತಿಳಿಸಿದರು.

ದೇಶ ರಕ್ಷಣೆಯಲ್ಲಿ ಸೈನಿಕರ ಪಾತ್ರ ಪ್ರಮುಖ. ರೈತರು, ಸೈನಿಕರು ಹಾಗೂ ಕಾರ್ಮಿಕರು ದೇಶದ ಪ್ರಮುಖ ನಾಯಕರು. ಈ ಮೂರು ವರ್ಗದ ಸಹಕಾರವಿಲ್ಲದೇ ನಮ್ಮ ಪ್ರತಿನಿತ್ಯದ ಕಾರ್ಯ ನಡೆಯುವುದು ಅಸಾಧ್ಯ. ದೇಶಕ್ಕಾಗಿ ಸೇವೆ ಸಲ್ಲಿಸಿದ ಮಾಜಿ ಸೈನಿಕರು ಸರ್ಕಾರದಿಂದ ದೊರಕುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಮುಂದಾಗಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಬೆಳಗಾವಿ ಬುಡಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಮುಖಂಡರಾದ ಉತ್ತಮ ಪಾಟೀಲ, ಸುಪ್ರಿಯಾ ಪಾಟೀಲ, ಸುಜಯ ಪಾಟೀಲ, ತವಂದಿ ಗ್ರಾ.ಪಂ. ಅಧ್ಯಕ್ಷೆ ಲಕ್ಷ್ಮೀ ಕಾಂಬಳೆ, ಉಪಾಧ್ಯಕ್ಷ ಸಂಜಯ ಪಾಟೀಲ ಸೇರಿದಂತೆ ನಿಪ್ಪಾಣಿ ತಾಲೂಕಿನ ಮಾಜಿ ಸೈನಿಕರು ಹಾಗೂ ಗ್ರಾಮದ ಹಿರಿಯರು ಉಪಸ್ಥಿತರಿದ್ದರು.
Laxmi News 24×7