Breaking News

ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಕಚೇರಿಯಲ್ಲಿ ನಡೆದ ಐಸಿಸಿ ಸಲಹಾ ಸಮಿತಿ ಸಭೆ

Spread the love

ಶಿವಮೊಗ್ಗ: ಭದ್ರಾ ಅಣೆಕಟ್ಟೆಯಿಂದ ಅಚ್ಚುಕಟ್ಟು ಪ್ರದೇಶಗಳಾದ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ದಾವಣಗೆರೆ ಜಿಲ್ಲೆಯ ರೈತರ ಬೇಸಿಗೆ ಬೆಳೆಗಾಗಿ ಜನವರಿ 3ರಿಂದ ಎಡದಂಡೆ ಕಾಲುವೆ ಹಾಗೂ ಜನವರಿ 8ರಿಂದ ಬಲದಂಡೆ ಕಾಲುವೆಯಿಂದ ಸತತ 120 ದಿನಗಳ ಕಾಲ ನೀರು ಹರಿಸಲಾಗುವುದು ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ತಿಳಿಸಿದರು.

ಶಿವಮೊಗ್ಗದ ಹೊರವಲಯ ಮಲವಗೊಪ್ಪದ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಕಚೇರಿಯಲ್ಲಿ ಇಂದು ನಡೆದ ಐಸಿಸಿ ಸಲಹಾ ಸಮಿತಿ ಸಭೆಯ ನಂತರ ಅವರು ಮಾತನಾಡಿದರು.

“ಭದ್ರಾ ಜಲಾಶಯ ಪೂರ್ಣಗೊಂಡಿರುವುದರಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ಸತತ 120 ದಿನ ನೀರು ಹರಿಸಲಾಗುವುದು. ಕೊನೆ ಭಾಗದ ರೈತರಿಗೆ ನೀರು ತಲುಪಿಸುವುದೇ ನಮ್ಮ ಮುಖ್ಯ ಉದ್ದೇಶ” ಎಂದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ