Breaking News

ಯಲ್ಲಮ್ಮನಗುಡ್ಡ ಜಾತ್ರೆಗಾಗಿ ವಿಶೇಷ ಬಸ್​​ ಸೌಲಭ್ಯ

Spread the love

ಹುಬ್ಬಳ್ಳಿ: ಬನದ ಹುಣ್ಣಿಮೆಯ ಪ್ರಯುಕ್ತ ಸವದತ್ತಿ ಯಲ್ಲಮ್ಮನಗುಡ್ಡದಲ್ಲಿ ನಡೆಯುವ ಪ್ರಸಿದ್ಧ ರೇಣುಕಾ ದೇವಿ ಜಾತ್ರೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಜಾತ್ರಾ ವಿಶೇಷ ಬಸ್​​ಗಳಿಗೆ ಇಂದು ಹೊಸೂರು ಬಸ್ ನಿಲ್ದಾಣದಲ್ಲಿ ಪೂಜೆ ಸಲ್ಲಿಸಿ, ಚಾಲನೆ ನೀಡಲಾಯಿತು.

ವಿಭಾಗೀಯ ನಿಯಂತ್ರಣಾಧಿಕಾರಿ ಹೆಚ್.ರಾಮನಗೌಡರ್ ಅವರು ಮಾತನಾಡಿ, “ಬನದ ಹುಣ್ಣಿಮೆಯ ಪ್ರಯುಕ್ತ ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿ ಜರುಗುವ ರೇಣುಕಾ ದೇವಿ ಜಾತ್ರೆಗೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ನೇರ ಜಾತ್ರಾ ವಿಶೇಷ ಬಸ್​ಗಳ ವ್ಯವಸ್ಥೆ ಮಾಡಲಾಗಿದೆ. ಹುಬ್ಬಳ್ಳಿ-ಧಾರವಾಡ ಅವಳಿ ನಗರ, ನವಲಗುಂದ ಮತ್ತು ಜಿಲ್ಲೆಯ ಇತರೆ ತಾಲೂಕುಗಳಿಂದ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸುತ್ತಾರೆ. ಅವರ ಅನುಕೂಲಕ್ಕಾಗಿ ಹುಬ್ಬಳ್ಳಿ ಮತ್ತು ನವಲಗುಂದದಿಂದ ಎಲ್ಲಮ್ಮನ ಗುಡ್ಡಕ್ಕೆ ನೇರವಾಗಿ ಜಾತ್ರಾ ಬಸ್​ಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಹುಬ್ಬಳ್ಳಿಯಲ್ಲಿ ಹೊಸೂರು ಪ್ರಾದೇಶಿಕ ಬಸ್ ನಿಲ್ದಾಣ ಮತ್ತು ಗೋಕುಲ ರಸ್ತೆ ಕೇಂದ್ರಿಯ ಬಸ್ ನಿಲ್ದಾಣದಿಂದ ಬಸ್​ಗಳು ಹೊರಡುತ್ತವೆ” ಎಂದು ತಿಳಿಸಿದರು.


Spread the love

About Laxminews 24x7

Check Also

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

Spread the loveರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ