ಗುಂಡಿನ ದಾಳಿ ಕಾಂಗ್ರೆಸ್ ಗೂಂಡಾಗಳ ದುಷ್ಕೃತ್ಯ: ವಿಜಯೇಂದ್ರ
ಬಳ್ಳಾರಿಯಲ್ಲಿ ಶಾಸಕ ಜನಾರ್ದನ ರೆಡ್ಡಿ ಮನೆ ಎದುರು ನಡೆದ ಘಟನೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈವಿಜಯೇಂದ್ರ ಖಂಡಿಸಿದ್ದಾರೆ.
ಕಾಂಗ್ರೆಸ್ ಗೂಂಡಾಗಳು ನಡೆಸಿದ ಸರ್ಕಾರಿ ಪ್ರಾಯೋಜಿತ ದುಷ್ಕೃತ್ಯ ಎಂದು ಖಂಡಿಸಿದ್ದಾರೆ. ಬ್ಯಾನರ್ ಅಳವಡಿಸುವುದನ್ನು ನೆಪವಾಗಿಸಿಕೊಂಡು ಜನಾರ್ದನ ರೆಡ್ಡಿ ಮತ್ತು ಅವರ ಕುಟುಂಬವನ್ನು ಗುರಿಯಾಗಿಸಲಾಗಿದೆ.
ಬಳ್ಳಾರಿಯಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಉಳಿದಿಲ್ಲ, ನಾಗರಿಕ ಸಮಾಜದ ನೆಮ್ಮದಿಯನ್ನು ಕೆಡವಲು ಸ್ಥಳೀಯ ಶಾಸಕರ ಕುಮ್ಮಕ್ಕಿನಿಂದ ದುಷ್ಕೃತ್ಯ ನಡೆದಿದೆ. ಜನಾರ್ದನ ರೆಡ್ಡಿ ಬಿಜೆಪಿಗೆ ಮರು ಸೇರ್ಪಡೆಯಾದ ನಂತರ ಪಕ್ಷ ಸಂಘಟನೆ ಬಲಗೊಳ್ಳುತ್ತಿದ್ದು, ಇದು ರಾಜಕೀಯ ದುಷ್ಟರಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ ಎಂದು ವಿಜಯೇಂದ್ರ ಹೇಳಿದ್ದಾರೆ.
Laxmi News 24×7