Breaking News

ಕಾಲ್ತುಳಿತದಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ಕ್ರಮಗಳನ್ನು ತೆಗೆದುಕೊಂಡು ಕ್ರಿಕೆಟ್ ಟೂರ್ನಿ ನಡೆಸಬೇಕು ಎಂದ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ

Spread the love

ಬೆಂಗಳೂರು: ಕಾಲ್ತುಳಿತ ದುರಂತ ಆಗಿದೆ ಎಂಬ ಕಾರಣಕ್ಕೆ ಕ್ರಿಕೆಟ್ ಪಂದ್ಯಾವಳಿ ನಿಲ್ಲಿಸುವುದು ಪರಿಹಾರವಲ್ಲ ಎಂದು ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ತಿಳಿಸಿದ್ದಾರೆ.

ವಿಧಾನಸೌಧದಲ್ಲಿಂದು ಮಾತನಾಡಿದ ಅವರು, “ಕಾಲ್ತುಳಿತ ದುರಂತ ಆಗಿದೆ ಎಂಬ ಕಾರಣಕ್ಕೆ ಪಂದ್ಯಾವಳಿ ನಿಲ್ಲಿಸೋದು ಪರಿಹಾರವಲ್ಲ. ಮತ್ತೆ ಅಂತಹ ಘಟನೆಗಳು ನಡೆಯದಂತೆ ಸೂಕ್ತ ಕ್ರಮಗಳನ್ನು ತೆಗೆದುಕೊಂಡು ಆಟವಾಡಿಸಬೇಕು. ಪಂದ್ಯಾವಳಿ ನಡೆಯಬೇಕೆಂಬುದು ಎಲ್ಲರ ಬಯಕೆ. ದುರಂತ ಆಗಬಾರದಾಗಿತ್ತು, ಹನ್ನೊಂದು ಮಂದಿ ಸಾವನ್ನಪ್ಪಿದ್ದಾರೆ. ಈ ನೋವು ಸಾವನ್ನಪ್ಪಿದ ಕುಟುಂಬದವರಿಗೆ ಇದೆ” ಎಂದರು.

ಕರ್ನಾಟಕ ಸ್ಟೇಟ್ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್​ಸಿಎ) ನೂತನ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಅವರ ತಂಡ ಮತ್ತೆ ಪಂದ್ಯಾವಳಿ ನಡೆಸಲು ಏನು ಮಾಡಬೇಕೋ ಅದನ್ನು ಮಾಡುತ್ತಾರೆ. ಎಲ್ಲ ಮಾರ್ಗಸೂಚಿಯನ್ವಯ ಕ್ರಿಕೆಟ್ ನಡೆಸಬೇಕು ಅಂತಾ ಸರ್ಕಾರ ಹೇಳಿದೆ. ಇದಕ್ಕೆಲ್ಲ ಸ್ವಲ್ಪ ಸಮಯಾವಕಾಶ ಬೇಕಾಗುತ್ತದೆ. ಸರ್ಕಾರ ಕ್ರಿಕೆಟ್ ಆಡಿಸುವ ಪ್ರಸ್ತಾವನೆ ತಿರಸ್ಕರಿಸಿಲ್ಲ. ನ್ಯಾ.ಕುನ್ಹಾ ವರದಿಯ ಶಿಫಾರಸುಗಳನ್ನು ಅಳವಡಿಸಲು ತಿಳಿಸಲಾಗಿದೆ. ಶಿಫಾರಸುಗಳಂತೆ ಕ್ರಮ ಕೈಗೊಂಡರೆ ಅನುಮತಿ ಕೊಡುವುದಾಗಿ ಸರ್ಕಾರ ತಿಳಿಸಿದೆ” ಎಂದು ಹೇಳಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ