Breaking News

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವನ್ಯಜೀವಿ ಮಂಡಳಿ ಸಭೆ

Spread the love

ಬೆಂಗಳೂರು: ರಾಜ್ಯದಲ್ಲಿ ಸಫಾರಿಗೆ ಅನುಮತಿ ನೀಡುವ ಬಗ್ಗೆ ಪರಿಣಿತರನ್ನೊಳಗೊಂಡ ತಾಂತ್ರಿಕ ಸಮಿತಿ ರಚಿಸಿ, ಅಭಿಪ್ರಾಯ ಪಡೆಯಲು ವನ್ಯಜೀವಿ ಮಂಡಳಿ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಸೂಚಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ವನ್ಯಜೀವಿ ಮಂಡಳಿಯ ಸಭೆ ಇಂದು ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆಯಿತು.

ಸಫಾರಿ ವಾಹನಗಳ ಕಿರಿಕಿರಿಯಿಂದ ವನ್ಯಜೀವಿಗಳು ಕಾಡಿನಿಂದ ನಾಡಿಗೆ ಬರುತ್ತಿವೆಯೇ, ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಸಫಾರಿ ವಾಹನಗಳ ಧಾರಣಾ ಸಾಮರ್ಥ್ಯವೆಷ್ಟು? ಎಂಬ ಬಗ್ಗೆ ಅಧ್ಯಯನ ಮಾಡಲು ತಜ್ಞರ ಸಮಿತಿ ರಚಿಸಲು ಕರ್ನಾಟಕ ವನ್ಯಜೀವಿ ಮಂಡಳಿಯ 20ನೇ ಸಭೆಯಲ್ಲಿ ನಿರ್ಣಯಿಸಲಾಯಿತು.CM Siddaramaiah

ಅರಣ್ಯದ ಪ್ರಾಣಿಗಳಿಗೆ ಸಫಾರಿಯಿಂದ ತೊಂದರೆಗಳಾಗುತ್ತಿದ್ದು, ಕಾಡಿನಿಂದ ಹೊರಬರುತ್ತಿವೆ ಎಂಬ ದೂರುಗಳು ಬಂದಿದ್ದವು. ಈ ಕಾರಣದಿಂದ ಅರಣ್ಯ ಇಲಾಖೆಯಿಂದ ಸಫಾರಿ ನಿರ್ಬಂಧಿಸಿ ಆದೇಶ ಹೊರಡಿಸಲಾಗಿತ್ತು. ಸಫಾರಿಯನ್ನು ಪುನಃ ಪ್ರಾರಂಭಿಸಲು ಒತ್ತಾಯ ಕೇಳಿ ಬರುತ್ತಿರುವುದಾಗಿ ಅರಣ್ಯ ಸಚಿವ ಈಶ್ವರ ಖಂಡ್ರೆ ಸಭೆಯಲ್ಲಿ ಮುಖ್ಯಮಂತ್ರಿಗಳ ಗಮನಕ್ಕೆ ತಂದರು.

ಸಫಾರಿ ನಿರ್ಬಂಧಿಸಿರುವ ಕಾರಣಕ್ಕೆ ಅದರ ಮೇಲೆ ಅವಲಂಬಿತರಾಗಿರುವ ಸ್ಥಳೀಯರೂ ಸಹ ಉದ್ಯೋಗದಿಂದ ವಂಚಿತರಾಗಿರುವುದಾಗಿಯೂ ತಿಳಿಸಿದರು. ಇದನ್ನು ಆಲಿಸಿದ ಮುಖ್ಯಮಂತ್ರಿ ಸಫಾರಿಗೆ ಮತ್ತೆ ಅನುಮತಿ ನೀಡುವ ಹಾಗೂ ಅರಣ್ಯ ಪ್ರವಾಸೋದ್ಯಮದಿಂದ ಮತ್ತೆ ಸ್ಥಳೀಯರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಈ ನಿರ್ಣಯವನ್ನು ಪುನರ್ ಪರಿಶೀಲಿಸಲು ಪರಿಣಿತರನ್ನೊಳಗೊಂಡ ತಾಂತ್ರಿಕ ಸಮಿತಿ ರಚಿಸಿ, ಅಭಿಪ್ರಾಯ ಪಡೆಯಲು ಸೂಚಿಸಿದರು.

ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ, ಕಳೆದ ಅಕ್ಟೋಬರ್ ಮತ್ತು ನವೆಂಬರ್‌ನಲ್ಲಿ ಹುಲಿಗಳ ದಾಳಿಯಿಂದ ಮೂವರು ಮೃತಪಟ್ಟು, ಒಬ್ಬರು ಶಾಶ್ವತ ವಿಶೇಷಚೇತನರಾದ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೆ ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಸಫಾರಿ ಸ್ಥಗಿತಗೊಳಿಸಲಾಗಿತ್ತು. ಈ ಎರಡು ತಿಂಗಳ ಅವಧಿಯಲ್ಲಿ ಕಾಡಿನ ಹೊರಗೆ ಹುಲಿ ದಾಳಿ ನಡೆದಿಲ್ಲ, ಯಾವುದೇ ಜೀವಹಾನಿ ಆಗಿಲ್ಲ ಎಂದು ಸಭೆಗೆ ವಿವರಿಸಿದರು.


Spread the love

About Laxminews 24x7

Check Also

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

Spread the loveರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ